ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್

8 hours ago

ಬೆಂಗಳೂರು: ಗದಗ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದೇನೆ ಎಂದು ಮಾಜಿ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.

ಗದಗ ತಾಲೂಕಿನ ರೈತರು ಹಾಗೂ ಜನತೆ ಎದುರಿಸುತ್ತಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಅವರಿಗೆ ಅಗತ್ಯವಿರುವ ಬರ ಪರಿಹಾರ ಹಾಗೂ ಸರ್ಕಾರದ ನೆರವು ದೊರೆಯುವಂತಾಗಬೇಕು ಎಂದು ಒತ್ತಾಯಿಸಿದ್ದಾರೆ.

ಗದಗ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡದಿದ್ದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದಿದ್ದಾರೆ.

ಗದಗ ತಾಲೂಕಿನ ರೈತರ ಹಿತಾಸಕ್ತಿಗಾಗಿ ಹಾಗೂ ಅವರಿಗೆ ನ್ಯಾಯಯುತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ನನ್ನ ಹೋರಾಟ ನಿರಂತರ ಎಂದು ಅಭಿಪ್ರಾಯಪಟ್ಟಿದ್ದಾರೆ.

Leave a Reply