ದಾವಣಗೆರೆ: ಶಾಲೆಗಳಲ್ಲಿ ಎಲ್ಲಾ ಸಮುದಾಯದ ಮಕ್ಕಳಿದ್ದು ಸಮಾನತೆಯನ್ನು ಕಾಣಬಹುದಾಗಿದ್ದು ಸಂವಿಧಾನದ ರಕ್ಷಣೆ ಮಾಡುವ ಜವಾಬ್ದಾರಿ ಭಾವಿ ಪ್ರಜೆಗಳಾದ ಮಕ್ಕಳ ಮೇಲಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಾಗಿದ್ದ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರವು ಜಾತ್ಯತೀತ, ಸಾಮರಸ್ಯ ದೇಶವಾಗಲು ಸಂವಿಧಾನದಡಿ ಆಡಳಿತ ನಡೆಸಿದಾಗ ಮಾತ್ರ ಸಾಧ್ಯವಾಗಲಿದೆ. ಸಂವಿಧಾನದಿಂದ ಎಲ್ಲಾ ಸಮುದಾಯದವರಿಗೆ ನ್ಯಾಯ ಸಿಗಲಿದ್ದು ಈ ಹಿನ್ನಲೆಯಲ್ಲಿ ವಿವಿಧತೆಯಲ್ಲಿಯು ಏಕತೆಯನ್ನು ಕಾಪಾಡಿಕೊಳ್ಳಲಾಗಿದೆ. ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ವಾಚಿಸಲಾಗುತ್ತಿದೆ. ಸಂವಿಧಾನ ಪೀಠಿಕೆ ಓದಿದರೆ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬಹುದಾಗಿದೆ ಎಂದರು.
ಸಂವಿಧಾನ ಎಲ್ಲಾ ಧರ್ಮಗಳ ಮೇರುಗ್ರಂಥವಾಗಿದ್ದು ಸಮಾಜದಲ್ಲಿ ಶಾಂತಿ ಇರಬೇಕೆಂದರೆ ಸಂವಿಧಾನ ಮಹತ್ವವನ್ನು ಎಲ್ಲರೂ ಅರಿತುಕೊಳ್ಳಬೇಕಾಗಿದೆ. ಅಂತಹ ಸಂವಿಧಾನವನ್ನು ಬರೆದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಾಗಿದ್ದು ಅವರ ಅನುಯಾಯಿಗಳಾದವರು ಎಂದಿಗೂ ಭ್ರಷ್ಟರಾಗದೇ ಎಂದಿಗೂ ಪ್ರಾಮಾಣಿಕರಾಗಿರಬೇಕು ಎಂದರು.
ಪ್ರಗತಿ ಮತ್ತು ಸಮೃದ್ಧಿಯ ಹಾದಿಯಲ್ಲಿಸಾಗಲು ದಾರಿದೀಪವಾಗಿದೆ. ದೂರದೃಷ್ಟಿ ಹೊಂದಿದ್ದ ನಮ್ಮ ಸಂವಿಧಾನದ ಶಿಲ್ಪಿಗಳು ಭಾರತದ ರಾಷ್ಟ್ರೀಯತೆಯ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದ್ದರು ಎಂಬುದನ್ನು ಇದು ತೋರಿಸುತ್ತದೆ. ಈ ಸಂವಿಧಾನದ ಮೂಲಕ ವಿಶ್ವದ ಅತಿ ದೊಡ್ಡ ಮತ್ತು ಯಶಸ್ವಿ ಪ್ರಜಾಪ್ರಭುತ್ವ ಎಂಬ ಗೌರವ ನಮಗಿದೆ ಎಂದರು.
ಮೇಯರ್ ಚಮ್ಮನ್ ಸಾಬ್ ಕೆ ಮಾತನಾಡಿ, ಸಂವಿಧಾನ ಇಲ್ಲದೆ ದೇಶ ಮುನ್ನಡೆಯಲು ಅಸಾಧ್ಯ, ಡಾ. ಬಿ.ಆರ್ ಅಂಬೇಡ್ಕರ್ ಅವರು ದೇಶ ವಿದೇಶಗಳಿಗೆ ಹೋಗಿ ಓದಿಕೊಂಡು ನಮಗೆ ಉತ್ತಮವಾದ ಸಂವಿಧಾನವನ್ನು ನೀಡಿದ್ದಾರೆ. ಅವರು ಎಲ್ಲಾ ಧರ್ಮಗಳ ಒಳಿತಿಗಾಗಿ ಸಂವಿಧಾನವನ್ನು ಬರೆದಿದ್ದಾರೆ ಎಂದರು.
ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಮಾತನಾಡಿ, ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಿದೆ ಎಂದರೆ ಅದಕ್ಕೆ ಬಾಬ ಸಾಹೇಬ್ ಅಂಬೇಡ್ಕರ್ ಬರೆದಿರುವಂತಹ ಸಂವಿಧಾನದಿಂದ ಸಾಧ್ಯವಾಗಿದೆ ಎಂದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ, ಅನೇಕ ಹೋರಾಟಗಳ ಮೂಲಕ ದೇಶ ಸ್ವಾತಂತ್ರ್ಯ ಹೊಂದಿತು. ಈ ಅವಧಿಯಲ್ಲಿ ಬ್ರಿಟೀಷರು ಅನೇಕ ಕಾನೂನು, ಕಾಯಿದೆಗಳನ್ನು ಜಾರಿಗೆ ತಂದರು. ಜಾತ್ಯತೀತ ದೇಶದಲ್ಲಿ ಎಲ್ಲರನ್ನು ಒಳಗೊಳ್ಳುವ ಸಂವಿಧಾನವನ್ನು ಡಾ. ಬಿ.ಆರ್.ಅಂಬೇಡ್ಕರ್ ರವರು ಬರೆದಿದಿದ್ದು ಪ್ರಪಂಚದಲ್ಲಿ ಮಾದರಿಯಾಗಿದೆ ಎಂದರು.
ನಿವೃತ್ತ ಕೆ.ಎ.ಎಸ್ ಅಧಿಕಾರಿ ರುದ್ರಪ್ಪ ಹನಗವಾಡಿ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸದಸ್ಯ ಪ್ರೊ.ಮಲ್ಲಿಕಾರ್ಜುನ್ ಆರ್ ಹಲಸಂಗಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಉಪ ಮೇಯರ್ ಸೋಗಿ ಶಾಂತಕುಮಾರ್, ಆಯುಕ್ತರಾದ ರೇಣುಕಾ, ಮಹಾನಗರ ಪಾಲಿಕೆ ಸದಸ್ಯರಾದ ಮಂಜುನಾಥ ಗಡಿಗುಡಾಳ್, ಪಾಲಿಕೆ ಸದಸ್ಯರಾದ ಸವಿತಾ ಹುಲ್ಲುಮನಿ, ಸುಧಾ ಇಟ್ಟುಗುಡಿ ಮಂಜುನಾಥ್, ಮೀನಾಕ್ಷಿ ಜಗದೀಶ್, ಗೋಣಪ್ಪ, ಆಶಾ ಉಮೇಶ್, ನಿವೃತ್ತ ಪ್ರಾಧ್ಯಾಪಕರಾದ ಎ.ಬಿ.ರಾಮಚಂದ್ರಪ್ಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಕೆ.ನಾಗರಾಜ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ನಿರೂಪಿಸಿದರು.




