ಬಳ್ಳಾರಿ: ಸಿರುಗುಪ್ಪ ತಾಲ್ಲೂಕಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಅಕ್ರಮ ದಾಸ್ತಾನು ಹಾಗೂ ಅಕ್ರಮ ಪಡಿತರ ಧಾನ್ಯ ಸಾಗಾಣಿಕೆ, ದಾಸ್ತಾನು ಮಾಡಿರುವ ಕುರಿತು ದಾಖಲುಗೊಂಡ ವಿವಿಧ ಪ್ರಕರಣಗಳಲ್ಲಿ ಜಪ್ತು ಪಡಿಸಿಕೊಂಡ 701.95 ಕ್ವಿಂಟಾಲ್ ಅಕ್ಕಿಯನ್ನು ಜಿಲ್ಲಾಧಿಕಾರಿಯವರ ಆದೇಶದಂತೆ ಜ.20 ರಂದು ಬೆಳಿಗ್ಗೆ 11 ಗಂಟೆಗೆ ಸಿರುಗುಪ್ಪ ಪಟ್ಟಣದ ಎಪಿಎಂಸಿ ಆವರಣದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಸಗಟು ಗೋದಾಮು ಇಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಸಿರುಗುಪ್ಪ ತಹಶೀಲ್ದಾರರು ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆಸಕ್ತಿಯುಳ್ಳ ಬಿಡ್ಡುದಾರರು ವಿವಿಧ ಷರತ್ತಿಗೊಳಪಟ್ಟು ಭದ್ರತಾ ಠೇವಣಿ ನೀಡಿ ನೋಂದಾಯಿಸಿಕೊಂಡವರಿಗೆ ಮಾತ್ರ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವಿದೆ. ಆಸಕ್ತ ಬಿಡ್ಡುದಾರರು ರೂ.1,50,000/- ಮುಂಗಡ ಭದ್ರತಾ ಠೇವಣಿ ಮೊತ್ತವನ್ನು ಮಾನ್ಯ ತಹಶೀಲ್ದಾರರು, ಸಿರುಗುಪ್ಪ ಇವರ ಹೆಸರಲ್ಲಿ ಡಿಡಿಯನ್ನು ಜ.20 ರಂದು ಸಂಜೆ 05.30 ರೊಳಗೆ ನೋಂದಾಯಿಸಿ, ಸಿರುಗುಪ್ಪದ ಆಹಾರ ನಿರೀಕ್ಷಕರಾದ ಮಹಾರುದ್ರ ಗೌಡ(ಮೊ.9986415163) ಮತ್ತು ವಿಜಯ್ ಕುಮಾರ್(ಮೊ.9449738127) ಇವರಿಂದ ಸ್ವೀಕೃತಿ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.




