ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಫಲಾನುಭವಿಗೆ ಹೆಚ್ಚುವರಿ ಅಕ್ಕಿಯ ಬದಲಿಗೆ ಹಣ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಬದಲಾಯಿಸಿದೆ. ಹಣದ ಬದಲಿಗೆ ಪ್ರತಿಫಲಾನುಭವಿಗೆ ಮಾಸಿಕ ಹತ್ತು ಕಿಲೋ ಅಕ್ಕಿ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾದು ಸಚಿವ ಕೆ ಎಚ್ ಮುನಿಯಪ್ಪ ಹೇಳಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪ್ರತಿ ಫಲಾನುಭವಿಗೆ ವಿತರಿಸಲು ಸಾಕಾಗುವಷ್ಟು ಅಕ್ಕಿಯ ಲಭ್ಯತೆ ಇರುವ ಹಿನ್ನೆಲೆಯಲ್ಲಿ ಕಳೆದ 2023ರ ಜುಲೈನಿಂದ ಫಲಾನುಭವಿಗಳ ಖಾತೆಗೆ ₹ 170 ರೂಪಾಯಿ ಜಮೆ ಮಾಡುವ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ ಎಂದರು.
ನವೆಂಬರ್, ಡಿಸೆಂಬರ್ ಬಾಕಿಯನ್ನು ಖಾತೆಗೆ ಜಮೆ ಮಾಡಲು ನಿರ್ಧರಿಸಲಾಗಿದ್ದು, ಜನವರಿಯಲ್ಲಿ ನೀಡಬೇಕಿದ್ದ ಹಣಕ್ಕೆ ಬದಲಾಗಿ ಫೆಬ್ರುವರಿ ಪಡಿತರದಲ್ಲಿ 5 ಕೆ.ಜಿ. ಹೆಚ್ಚುವರಿ ಅಕ್ಕಿ ನೀಡುತ್ತಿದೆ. ಅಂದರೆ ಇದೊಂದು ತಿಂಗಳು ಪಡಿತರದಾರರಿಗೆ 15 ಕೆ.ಜಿ. ಅಕ್ಕಿ ದೊರೆಯಲಿದೆ ಎಂದರು.
ಕೇಂದ್ರ ಸರ್ಕಾರ ಕೆ.ಜಿ.ಗೆ 22 ರೂಪಾಯಿ 50 ಪೈಸೆಯ ದರಕ್ಕೆ ಅಕ್ಕಿ ಸರಬರಾಜು ಮಾಡಲು ಒಪ್ಪಿಗೆ ನೀಡಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು 190 ಕೋಟಿ ರೂಪಾಯಿ ಉಳಿತಾಯವಾಗಲಿದೆ ಎಂದರು.
ಕಳೆದ ಒಂದೂವರೆ ವರ್ಷದ ಹಿಂದೆ ಅನ್ನಭಾಗ್ಯ ಯೋಜನೆ ಆರಂಭಿಸಿದಾಗ ರಾಜ್ಯ ಸರ್ಕಾರ ಪ್ರತಿ ಕಿಲೋ ಅಕ್ಕಿಗೆ 34 ರೂಪಾಯಿ ನೀಡಲು ಸಿದ್ಧವಿದ್ದರೂ, ಅಗತ್ಯ ಅಕ್ಕಿ ದೊರೆತಿರಲಿಲ್ಲ. ಹಾಗಾಗಿ, ಅಷ್ಟೇ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಈಗ 22.50 ದರದಂತೆ ಅಕ್ಕಿ ಖರೀದಿಸಿ ಪೂರೈಸುವುದರಿಂದ ರಾಜ್ಯ ಸರ್ಕಾರಕ್ಕೆ ದೊಡ್ಡ ಮೊತ್ತದ ಹಣ ಉಳಿತಾಯವಾಗಲಿದೆ ಎಂದರು.




