ಬೆಂಗಳೂರು: ಅವಧಿಗೂ ಮುನ್ನವೇ ಆರಂಭವಾಗಿರುವ ನೈರುತ್ಯ ಮುಂಗಾರು ಮಳೆ ಆರಂಭದಲ್ಲೇ ಅಬ್ಬರಿಸಿ ಆರ್ಭಟಿಸುತ್ತಿದೆ. ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ರೈತಾಪಿ ವರ್ಗದಲ್ಲಿ ಹರ್ಷ ಮೂಡಿಸಿದೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಸದ್ಯ ಆರಂಭವಾಗಿರುವ ಮಳೆ ಈ ವಾರಾಂತ್ಯದವರೆಗೂ ಮುಂದುವೆಯುವ ಮುನ್ಸೂಚನೆಗಳಿವೆ. ಮೇ 29ರವರೆಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಗಳಿದ್ದು, ಮೇ 29ರ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನ ಜಿಲ್ಲೆಗಳಿಗೆ ಮೇ 29ರ ವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೆಲವೆಡೆ ಗಂಟೆಗೆ 40-50 ಕಿ.ಮೀ.ವೇಗದ ಬಿರುಗಾಳಿ, ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಲಕ್ಷಣಗಳಿವೆ ಎಂದು ಹೇಳಿದೆ.


