ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025
ಗಾಮನಗಟ್ಟಿಯ ಭಾರೀ ವಾಹನ ಚಾಲಕರ ತರಬೇತಿ ಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
ಧಾರವಾಡ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025 ರ ಅಂಗವಾಗಿ ಹುಬ್ಬಳ್ಳಿ ಗಾಮನಗಟ್ಟಿಯ ಭಾರೀ ವಾಹನ ಚಾಲಕರ ತರಬೇತಿ ಸಂಸ್ಥೆಯಲ್ಲಿ ವಾಹನ ಚಾಲಕರಿಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಧಾರವಾಡ (ಪಶ್ಚಿಮ) ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಉಪಸಾರಿಗೆ ಆಯುಕ್ತ ನೂರ್ ಮೊಹಮ್ಮದ್ ಬಾಷಾ ಅವರು ರಸ್ತೆ ಅಪಘಾತಕ್ಕೆ ಕಾರಣ ಹಾಗೂ ಸಂಚಾರಿ ನಿಯಮಗಳನ್ನು ವಾಹನ ಚಾಲಕರಿಗೆ ಮನವರಿಕೆ ಮಾಡಿ, ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ದ್ವಿಚಕ್ರ ವಾಹನ ಬಳಸುವ ಪೋಷಕರಿಗೆ 4 ವರ್ಷದ ಒಳಗಿನ ಮಕ್ಕಳಿಗೆ ಸೇಪ್ಟಿ ಹಾರ್ನೆಸ್‍ನನ್ನು ಬಳಸಿಕೊಂಡು ವಾಹನವನ್ನು ಚಲಾಯಿಸುವಂತೆ ವಾಹನ ಚಾಲಕರಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಛೇರಿಯ ಸಿಬ್ಬಂದಿ ರಮೇಶ ಮಾಳಗಿ, ಹಿಮೋವಾನಿ, ಸಚಿನ್ ಹುಲಕೋಟಿ, ವಿಜಯ ಕಮ್ಮಾರ, ಅಬ್ಬಾಸಾಹೇಬ್ ಭಾಗವಹಿಸಿದ್ದರು.




