ವಿಶ್ವ ಆರೈಕೆದಾರರ ದಿನಾಚರಣೆ
ಶಿವಮೊಗ್ಗ: ವಿಶೇಷ ವಿಕಲಚೇತನರಿಗೆ ದೈಹಿಕವಾಗಿ, ಮಾನಸಿಕವಾಗಿ ಸದೃಢರನ್ನಾಗಿಸುವಲ್ಲಿ ಆರೈಕೆದಾರರ ಪಾತ್ರ ತುಂಬಾ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾ ನ್ಯಾ. ಸಂತೋಷ್ ಎಂ.ಎಸ್ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಶ್ರೀ ಗಾನಯೋಗಿ ಪಂಚಾಕ್ಷರಿ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ಅ.29 ರಂದು ಏರ್ಪಡಿಸಲಾಗಿದ್ದ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ವಿಶೇಷಚೇತನ ವ್ಯಕ್ತಿಗಳ ಬದುಕು, ಅವರ ಸಾಮರ್ಥ್ಯ ಆರೋಗ್ಯವಂತರಿಗೆ ಕೂಡ ಸ್ಪೂರ್ತಿದಾಯಕವಾಗಿದೆ ಎಂದ ಅವರು ಆರೈಕೆದಾರರಿಗೆ ಶುಭ ಹಾರೈಸುವ ಮೂಲಕ ಅವರ ಶ್ರಮವನ್ನು ಶ್ಲಾಘಿಸಿದರು.
ಮಾನಸಿಕ ತಜ್ಞ ಡಾ. ಪ್ರಮೋದ್ ಹೆಚ್.ಎಲ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು, 21 ವಿಕಲತೆಗಳ ಸ್ವರೂಪದ ಬಗ್ಗೆ ಎಂಆರ್‌ಡಬ್ಲೂ, ವಿಆರ್‌ಡಬ್ಲೂ ಹಾಗೂ ವಿಆರ್‌ಡಬ್ಲೂ ಆರೈಕೆದಾರರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಶಿರೇಖಾ, ಆಶಾಕಿರಣ ಬುದ್ದಿಮಾಂದ್ಯ ಶಾಲಾ ಸಿಬ್ಬಂದಿ, ವಿವಿಧ ಸ್ವಯಂ ಸೇವಾ ಸಂಸ್ಥೆಗಳು. ಎಂಆರ್‌ಡಬ್ಲೂ,ವಿಆರ್‌ಡಬ್ಲೂ ಹಾಗೂ ವಿಆರ್‌ಡಬ್ಲೂ ಆರೈಕೆದಾರರು, ಇಲಾಖೆ ಸಿಬ್ಬಂದಿ ವರ್ಗದವರು ಹಾಜರಿದ್ದರು.




