ಬೆಂಗಳೂರು: ಕೊಪ್ಪಳದ ಪುರಾಣ ಪ್ರಸಿದ್ಧ ಆಂಜನೇಯನ ಜನ್ಮ ಸ್ಥಾನವೆನ್ನಲಾದ ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಿಗೆ ರೋಪ್ ವೇ ನಿರ್ಮಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪ್ರವಾಸೋದ್ಯಮ ಕಂದಾಯ ಸೇರಿದಂತೆ ಇತರೆ ಇಲಾಖೆಗಳ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಸಭೆಯಲ್ಲಿ ಅಂಜನಾದ್ರಿ ಪರ್ವತಕ್ಕೆ 200 ಕೋಟಿ ರೂಪಾಯಿ ವೆಚ್ಚದಲ್ಲಿ ರೋಪ್ ವೇ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. ಇದಲ್ಲದೆ ರಾಜ್ಯದ ಒಟ್ಟು 11 ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ರೋ ನಿರ್ಮಿಸಲು ನಿರ್ಧರಿಸಲಾಗಿದೆ ಎಂದರು.
ಅಂಜನಾದ್ರಿ ಪರ್ವತದಲ್ಲಿ ತಕ್ಷಣವೇ ಎಲ್ಲಾ ಅಗತ್ಯ ಮೂಲಸೌಕರ್ಯ ಸೃಷ್ಟಿಸುವ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹನುಮ ಜಯಂತಿಯ ಸಮಯದಲ್ಲಿ ಬೆಟ್ಟಕ್ಕೆ ಬರುವ ಭಕ್ತರು ತಂಗಲು ಅಗತ್ಯವಿರುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದರು.
ಈ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ 200 ಕೋಟಿಗಳ ಕಾಮಗಾರಿಗಳು ಮಂಜೂರಾಗಿವೆ. ಈವರೆಗೆ ಈ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸ್ತಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂಮಿ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101 ಎಕರೆ 30 ಗುಂಟೆ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ ಎಂದರು.
ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕು. ಈ ಎಲ್ಲ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ ಎನ್ಒಸಿ ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.




