ರಾಜ್ಯ ಸಚಿವ ಸಂಪುಟ ನಿರ್ಧಾರಕ್ಕೆ ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದಿಂದ ಅಭಿನಂದನೆ
ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಂಪುಟ ಸಚಿವರು ಸರ್ಕಾರಿ ಮಹಿಳಾ ನೌಕರರು, ಗಾರ್ಮೆಂಟ್ಸ್ ಮಹಿಳಾ ನೌಕರರು, ಐ.ಟಿ.ಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರ ಸಂದರ್ಭದಲ್ಲಿ ಒಂದು ರಜಾ ನೀಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿ ಗೌಡ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
ಮಹಿಳೆಯರು ಅಬಲೆಯರು ಅಲ್ಲ, ಇಂದು ಸಬಲೆಯರಾಗಿ ಹೊರಹೊಮ್ಮಿದ್ದಾರೆ. ಮಹಿಳೆಯು ಕುಟುಂಬದ ಜವಾಬ್ದಾರಿಯ ಜೊತೆಯಲ್ಲಿ ಸಮಾಜದ ಅಭಿವೃದ್ದಿಗೆ ಶ್ರಮಿಸುತ್ತಾಳೆ. ತಂದೆ, ತಾಯಿ ಅತ್ತೆ, ಮಾವ, ಗಂಡ, ಮಕ್ಕಳು ಹೀಗೆ ಕುಟುಂಬದವರ ಎಲ್ಲರ ಯೋಗಕ್ಷೇಮ ನೋಡಿಕೊಂಡು ನಂತರ ಸಮಯದ ಗಮನಕಡೆ ಕೊಡದೇ ತನ್ನ ಕೆಲಸದಲ್ಲಿ ನಿರತಳಾಗುತ್ತಾಳೆ ಎಂದಿದ್ದಾರೆ.
ಎಂದು ಸಹ ದಣಿವರಿಯದ ಕೆಲಸ ಮಹಿಳೆಯರು ಪ್ರತಿ ತಿಂಗಳ ಋತುಚಕ್ರ ಸಂದರ್ಭದಲ್ಲಿ ಮಾನಸಿಕ, ದೃಹಿಕವಾಗಿ ಯಾತೆನೆ ಅನುಭವಿಸುತ್ತಾಳೆ. ಆದರೆ ಇದೆಲ್ಲವನ್ನು ಲೆಕ್ಕಿಸದೇ ತನಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತಾಳೆ ಎಂದಿದ್ದಾರೆ.
ರಾಜ್ಯ ಸಚಿವ ಸಂಪುಟದಲ್ಲಿ ಋತುಚಕ್ರದ ಸಂದರ್ಭದಲ್ಲಿ ವೇತನಸಹಿತ ಒಂದು ದಿನದ ರಜಾ ನೀಡಬೇಕು ಎಂದು ಸರ್ಕಾರ ಸಚಿವ ತೀರ್ಮಾನ ಮಾಡಿರುವುದು ರಾಜ್ಯದ ಮಹಿಳೆಯರಿಗೆ ಸಂತಸದ ತೀರ್ಮಾನವಾಗಿದೆ ಎಂದು ಸರ್ಕಾರದ ತೀರ್ಮಾನವನ್ನ ಶ್ಲಾಘಿಸಿದ್ದಾರೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರಿಗೂ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.




