ಧಾರವಾಡ: ತುಪ್ಪರಿಹಳ್ಳಕ್ಕೆ ರೂ.315 ಕೋಟಿ ಮಂಜೂರಾಗಿದೆ. ಮೊದಲ ಹಂತದಲ್ಲಿ 150 ಕೋಟಿ ಟೆಂಡರ್ ಆಗಿದೆ. ದ್ವಿತೀಯ ಹಂತದಲ್ಲಿ 110 ಕೋಟಿ ಟೆಂಡರ್ ಆಗಬೇಕಿದೆ ಎಂದು ನವಲಗುಂದ ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ತುಪ್ಪರಿ ಹಳ್ಳ ಹಾಗೂ ಬೆಣ್ಣಿ ಹಳ್ಳದ ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳಾದ ಹನಸಿ, ಶಿರಕೋಳ, ಬಳ್ಳೂರ ಗ್ರಾಮಗಳಿಗೆ ಸಚಿವ ಸಂತೋಷ ಲಾಡ್, ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ನೀಡಿ ಸ್ಥಿತಿಗತಿ ಪರಿಶೀಲನೆ ನಡೆಸಿದರು.
ನಂತರ ಮಾತಾಡಿದ ಕೋನರೆಡ್ಡಿ, ಉಪ್ಪಿನಬೆಟಗೇರಿಯಿಂದ ಪ್ರಾರಂಭವಾಗುವ ಬೆಣ್ಣೆಹಳ್ಳ ನವಲಗುಂದವರೆಗೆ ಹರಿಯಲಿದೆ. ಈ ನೀರು ನೀರಾವರಿ ಬಳಕೆಗೆ ಯೋಜನೆ ರೂಪಿಸಲಿದೆ. ಈ ಬಗ್ಗೆ ವಿಸ್ತೃತ ಯೋಜನಾ ವರದಿ ತಯಾರಿಸುವ ಪ್ರಕ್ರಿಯೆ ನಡೆದಿದೆ ಎಂದರು.
ಬಾಗಲಕೋಟೆ, ಹಾವೇರಿ, ಧಾರವಾಡ ಜಿಲ್ಲೆಗಳನ್ನು ಒಳಗೊಳ್ಳುವ ಈ ಬೆಣ್ಣೆಹಳ್ಳ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೀರಾವರಿಗೆ ಒಳಪಡಿಸುವಂತೆ ಘೋಷಿಸಿದ್ದು, ಎಸ್ಡಿಆರ್ಎಫ್ ದಲ್ಲಿ 1,600 ಕೋಟಿಗೆ ಡಿಪಿಆರ್ ಆಗಿದೆ ಎಂದರು.
ಅಲ್ಲದೇ, ನೀರು ಸಂಗ್ರಹಿಸಲು ಜಾಗದ ಕೊರತೆ ಇರುವ ಕಾರಣಕ್ಕೆ ಕೆರೆಗಳಿಗೆ ಈ ನೀರನ್ನು ತುಂಬಿಸಿ, ಪಂಪ್ ಮಾಡಿ ಬಳಸುವ ಯೋಜನೆ ರೂಪಿಸುವ ಕಾರ್ಯ ನಡೆದಿದೆ. ಇದು ಮೂರು ಹಂತದಲ್ಲಿ ಕಾರ್ಯ ಜರುಗಲಿದೆ ಎಂದರು.
ಬೆಣ್ಣೆಹಳ್ಳದ ಜಮೀನು ಹಾನಿ ಸರ್ವೆ ಆಗಿಲ್ಲ. ಸದ್ಯ ಮಳೆಗಾಲ ಇದೆ. ಮಳೆಗಾಲದ ಬಳಿಕ ಸರ್ವೆ ಕಾರ್ಯ ನಡೆಯಲಿದೆ. ಬೆಣ್ಣೆಹಳ್ಳ ಅಗಲೀಕರಣ ಮಾಡಲು ಹಳ್ಳದ ಅಂಚಿನ ರೈತರು ಕೂಡ ಸಹಕಾರ ನೀಡಬೇಕಿದೆ ಎಂದರು.




