ಬೆಂಗಳೂರು: SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್ ಅವರನ್ನು ಇಂದು ಭೇಟಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಸನ್ಮಾನಿಸಿ ಗೌರವಿಸಿದರು.
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
- ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆ
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
ಇದೇ ವೇಳೆ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್ ವಿತರಿಸಿದರು.

ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ಇಬ್ಬರೂ ಮಕ್ಕಳು ನಿರೂಪಿಸಿದ್ದಾರೆ. ಮುಂದೆ ಕೂಡ ಇದೇ ರೀತಿ ಓದಿ ನಿಮ್ಮ ಶಾಲೆ, ಶಿಕ್ಷಕರು, ಪೋಷಕರಿಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು.




