ಕೃಷಿ ಭೂಮಿಗೆ ನೀರು ಒದಗಿಸಲು ರೂ.900 ಕೋಟಿ ವೆಚ್ಚದ ಯೋಜನೆ: ಡಿ.ಕೆ.ಶಿವಕುಮಾರ್

2 years ago

ಬೆಂಗಳೂರು: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಈ ಪ್ರದೇಶದ ಅಭಿವೃದ್ಧಿ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಹೀಗಾಗಿ ಈ ಬಾರಿಯ ಬಜೆಟ್ ಅಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗಳಿಗೆ ನೀರನ್ನು ಒದಗಿಸಲು ರೂ.900 ಕೋಟಿ ವೆಚ್ಚದಲ್ಲಿ ಯೋಜನೆ ಘೋಷಣೆ ಮಾಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಕರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ ಎಂದರು.

ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲಗಳನ್ನು ಕಲ್ಪಿಸಿಕೊಟ್ಟಿದೆ. ಅವರು ನಮ್ಮ ನೀರು, ಗಾಳಿ ಕುಡಿಯುತ್ತಿದ್ದಾರೆ. ನಮ್ಮ ಭೂಮಿಯಲ್ಲಿ ವಾಸವಾಗಿದ್ದಾರೆ, ವ್ಯವಸಾಯ ಮಾಡುತ್ತಿದ್ದಾರೆ. ಎಲ್ಲರೂ ಒಟ್ಟಾಗಿ ಬಾಳುವ ಮೂಲಕ ಸಮಾಜದಲ್ಲಿ ಶಾಂತಿ ನೆಲಸಲು ನೆರವಾಗಬೇಕು ಎಂದು ಮನವಿ ಮಾಡಿದರು.

Leave a Reply