ಬೆಂಗಳೂರು: ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ ಅನುದಾನ ಹಂಚಿಕೆ ಮಾಡಿದ್ದ ರಾಜ್ಯ ಸರ್ಕಾರ ವಿಪಕ್ಷಗಳ ಶಾಸಕರಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ತಲಾ 25 ಕೋಟಿ ರೂ. ಅನುದಾನ ಹಂಚಿಕೆ ಸಂಬಂಧ ವಿಪಕ್ಷಗಳ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 2025-26ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ 25 ಕೋಟಿ ರೂ. ವಿಶೇಷ ಅನುದಾನ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ. ಅದರನ್ವಯ ಕಾಮಗಾರಿವಾರು ಅನುದಾನದ ಹಂಚಿಕೆಯ ಪ್ರಮಾಣವನ್ನು ನಿಗದಿಪಡಿಸಿದ್ದು, ಇಲಾಖಾವಾರು ಕಾಮಗಾರಿಗಳ ವಿವರಗಳನ್ನು ಮುಂದಿನ ಕ್ರಮಕ್ಕಾಗಿ ಆರ್ಥಿಕ ಇಲಾಖೆಗೆ ಸಲ್ಲಿಸಲು ಕೋರಿದೆ ಎಂದಿದ್ದಾರೆ.
ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಡಿ ಬರುವ ರಸ್ತೆ ಮತ್ತು ಸೇತುವೆ ಕಾಮಗಾರಿಗಳು ಹಾಗೂ ನಗರಾಭಿವೃದ್ಧಿ ಇಲಾಖೆಯಡಿ ಬರುವ ನಗರ ಪ್ರದೇಶದ ಕಾಮಗಾರಿಗಳಿಗೆ 18.75 ಕೋಟಿ ರೂ. ಅನುದಾನ ನೀಡಲಾಗುವುದು. ಇತ್ತ ವಿವೇಚನಾಧಿಕಾರದಡಿ ವಿಧಾನಸಭಾ ಸದಸ್ಯರು ಆಯ್ಕೆ ಮಾಡಬಹುದಾದ ಇತರೆ ಇಲಾಖೆಯ ಕಾಮಗಾರಿಗಳಿಗೆ 6.25 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ.
ಕೇವಲ ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಅಧಿವೇಶನದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ತಮಗೂ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿಪಕ್ಷಗಳ ಶಾಸಕರಿಗೂ ತಲಾ 25 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನಾನು ಅನುದಾನ ಕೊಡುತ್ತೇನೆ. ಇಷ್ಟೇ ಕೊಡುತ್ತೇನೆ ಎಂದು ಹೇಳಲು ಆಗದು. ಬಿಜೆಪಿ, ಜೆಡಿಎಸ್ ಸೇರಿ ಎಲ್ಲಾ ಶಾಸಕರಿಗೆ ಅನುದಾನ ಕೊಡುತ್ತೇನೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿಲ್ಲ. ಕರ್ನಾಟಕದ ಅಭಿವೃದ್ಧಿ ನಡೆಯುತ್ತಿದೆ. ಗ್ಯಾರಂಟಿ ಯೋಜನೆಯನ್ನೂ ಕೂಡ ನಡೆಸುತ್ತಿದ್ದೇವೆ. ಇವರು ಗ್ಯಾರಂಟಿ ಸಂಬಂಧ ನಮ್ಮನ್ನು ವಿರೋಧ ಮಾಡಿದರು ಎಂದು ಹೇಳಿದರು.
ಆದರೆ ಬೇರೆ ರಾಜ್ಯಗಳಲ್ಲಿ ನಮ್ಮನ್ನೇ ಕಾಪಿ ಮಾಡಿದರು. ನಾವು 692 ಭರವಸೆ ಕೊಟ್ಟಿದ್ದೆವು, ಅದರಲ್ಲಿ 264 ಭರವಸೆ ಈಡೇರಿಸಿದ್ದೇವೆ. ಉಳಿದವುಗಳನ್ನು ಕೂಡ ಈಡೇರಿಸುತ್ತೇವೆ. ನುಡಿದಂತೆ ನಡೆದ ಸರ್ಕಾರ ಅಂದರೆ ಅದು ಕಾಂಗ್ರೆಸ್ ಸರ್ಕಾರ ಅಂತ ಎದೆತಟ್ಟಿ ಹೇಳುತ್ತೇನೆ ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.




