ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಆಡಿದ ಮಾತು ಆಡಳಿತ ಮತ್ತು ವಿಪಕ್ಷದ ಸದಸ್ಯರ ನಡುವೆ ಜಟಾಪಟಿಗೆ ಕಾರಣವಾಗಿ ಕಲಾಪವನ್ನು ಕೆಲಕಾಲ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
ರಾಜ್ಯಪಾಲರು ಮಾಡಿದ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುತ್ತಿದ್ದ ಸಿದ್ದರಾಮಯ್ಯ, ದ್ವೇಷದ ಭಾಷಣ ಮಾಡಿ, ಗಲಭೆ ಸೃಷ್ಟಿಸುವವರು ಆರ್ ಎಸ್ ಎಸ್ ನವರು ಎಂದರು.
ತಮ್ಮ ಸರ್ಕಾರದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ. ಹಿಂದಿನ ಸರ್ಕಾರಕ್ಕಿಂತಲೂ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡಿದ್ದೇವೆ. ಗಂಭೀರ ಅಪರಾಧಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ನಿನ್ನೆಯಷ್ಟೆ 75 ಕೋಟಿ ರೂ. ಮೊತ್ತದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದರು.
ಈಗ ತೆಗೆದುಕೊಂಡಿರುವ ಕ್ರಮಗಳಿಂದ ನನಗೆ ತೃಪ್ತಿಯಾಗಿಲ್ಲ. ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಂಡು ಅಪರಾಧಗಳ ಪ್ರಮಾಣವನ್ನು ಕಡಿಮೆ ಮಾಡುವುದು ನಮ್ಮ ಇರಾದೆ. ಆದರೆ ಅಪರಾಧ ಮಾಡುವವರೇ ನೀವು, ಆರ್.ಎಸ್ ಎಸ್, ಬಿಜೆಪಿಯವರು. ದ್ವೇಷದ ರಾಜಕಾರಣ ಮಾಡುವವರೇ ನೀವು ಎಂದು ವಾಗ್ದಾಳಿ ನಡೆಸಿದರು.
ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತ ಪಡಿಸಿ ಮುಖ್ಯಮಂತ್ರಿಗಳ ವಿರುದ್ಧ ತಿರುಗಿಬಿದ್ದರು. ದೇಶದ್ರೋಹದ ಕೃತ್ಯಗಳನ್ನು ಮಾಡುವ ನಿಷೇಧಿತ ಸಂಘಟನೆಗಳ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದವರು ನೀವು ಎಂದು ಕಿಡಿಕಾರಿದರು.
ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಇಲ್ಲಿರುವ ನಾವೆಲ್ಲರೂ ಆರ್ ಎಸ್ ಎಸ್. ಈ ದೇಶದ ಪ್ರಧಾನಿ, ಗೃಹ ಸಚಿವರು ಆರ್ ಎಸ್ ಎಸ್ ಹಿನ್ನೆಲೆಯಿಂದ ಬಂದವರು. ನೀವು ಇವರಿಗೆಲ್ಲಾ ಅಪಮಾನ ಮಾಡುತ್ತಿದ್ದೀರಿ ಎಂದರು.
ಕಾಂಗ್ರೆಸ್ ನವರು ಪಿ ಎಫ್ ಐ ಏಜೆಂಟ್ ಗಳು ಮುಖ್ಯಮಂತ್ರಿಯವರ ಹೇಳಿಕೆಯನ್ನು ಕಡಿತದಿಂದ ತೆಗೆಯಬೇಕು. ಇಲ್ಲವಾದರೆ ನಾವು ಕಲಾಪ ನಡೆಯಲು ಬಿಡುವುದಿಲ್ಲ ಎಂದರು.
ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಬಿಜೆಪಿಯವರು ಆರ್ ಎಸ್ ಎಸ್ ಹೇಳಿದಂತೆ ಮಾಡುತ್ತಾರೆ. ಇಲ್ಲಿ ಎದ್ದು ನಿಂತು ಗಲಾಟೆ ಮಾಡಿ ಎಂದು ಯಾರು ಹೇಳಿಕೊಟ್ಟಿದ್ದಾರೆ ಎಂದು ನಮಗೆ ಗೊತ್ತಿದೆ. ಆರ್ ಎಸ್ ಎಸ್ ನವರು ಬೆಂಕಿ ಹಚ್ಚುತ್ತಾರೆ. ನಿಮಗೆಲ್ಲಾ ನಾವು ಹೆದರುವುದಿಲ್ಲ. ಏನೇ ಮಾಡಿದರೂ ಅದಕ್ಕೆ ತಕ್ಕ ಉತ್ತರ ನೀಡಲು ನಾವು ಸಿದ್ಧ. ನನ್ನ ಹೇಳಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದರು.
ಆಗ ಸಭಾಧ್ಯಕ್ಷರ ಪೀಠದಲ್ಲಿದ್ದ ಶಿವಲಿಂಗೇಗೌಡ, ಮುಖ್ಯಮಂತ್ರಿಯವರ ಹೇಳಿಕೆ ಅಸಂಸದೀಯ ಪದವಲ್ಲ. ಹಾಗಾಗಿ ಕಡತದಿಂದ ತೆಗೆಯಲು ಸಾಧ್ಯವಿಲ್ಲ ಎಂದರು.
ಇದರಿಂದ ಕೆರಳಿದ ಬಿಜೆಪಿ ಸದಸ್ಯರು ದೇಶದ್ರೋಹಿ ಕಾಂಗ್ರೆಸ್ ಗೆ ಧಿಕ್ಕಾರ, ಆರ್ ಎಸ್ ಎಸ್ ಜಿಂದಾಬಾದ್, ಕಾಂಗ್ರೆಸ್ ನವರು ಪಾಕಿಸ್ತಾನ್ ಏಜೆಂಟ್, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.
ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸದಸ್ಯರು ಬಿಜೆಪಿಯವರನ್ನು ಕುರಿತು, ದೇಶದಲ್ಲಿ ಅಶಾಂತಿ ನಿರ್ಮಾಣವಾಗಿರುವುದು ನಿಮ್ಮಿಂದ, ನೀವು ದೇಶದ್ರೋಹಿಗಳು, ಬ್ರಿಟಿಷರ ಏಜೆಂಟ್ ಗಳಾಗಿದ್ದವರು ಎಂದು ವಾಗ್ದಾಳಿ ನಡೆಸಿದರು. ಇದರಿಂದ ಆಡಳಿತ ಮತ್ತು ವಿಪಕ್ಷಗಳ ನಡುವೆ ಗದ್ದಲ ತೀವ್ರವಾದಾಗ ಸಭಾಧ್ಯಕ್ಷ ಸ್ಥಾನದಲ್ಲಿದ್ದ ಕೆ.ಎಂ.ಶಿವಲಿಂಗೇಗೌಡ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು.




