ಆರ್ಟಿಸಿ-ಆಧಾರ್ ಜೋಡಣೆ ಅಭಿಯಾನ: ಕೃಷ್ಣ ಬೈರೇಗೌಡ

2 years ago

ಬೆಂಗಳೂರು: ಪ್ರಸ್ತುತ ರಾಜ್ಯಾದ್ಯಂತ ಆರ್ಟಿಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳ ಮಾಸಿಕ ಸಭೆಯ ನಡುವೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಗ್ರಾಮ ಲೆಕ್ಕಿಗರು ಮನೆ ಬಾಗಿಲಿಗೆ ತೆರಳಿ ಆರ್ಟಿಸಿ-ಆಧಾರ್ ಜೋಡಣೆ ಕೆಲಸದಲ್ಲಿ ನಿರತರಾಗಿದ್ದಾರೆ. ಈವರೆಗೆ 15 ಲಕ್ಷ ಆರ್ಟಿಸಿ ಮಾಲೀಕರನ್ನು ಸಂಪರ್ಕಿಸಿದ್ದು, ಈ ಪೈಕಿ88,000 ಆರ್ಟಿಸಿಯಲ್ಲಿ ಕೃಷಿಭೂಮಿ ಇರುವುದು ಕಂಡುಬಂದಿದ್ದು, ಆಧಾರ್ ಲಿಂಕ್ ಮಾಡಲಾಗಿದೆ. ಮುಂದಿನ ಎರಡು ಮೂರು ತಿಂಗಳಲ್ಲಿ ಎಲ್ಲಾ ಆರ್ಟಿಸಿ ಮಾಲೀಕರನ್ನೂ ತಲುಪಲು ರೂಪುರೇಷೆ ಸಿದ್ದಪಡಿಸಲಾಗಿದೆ ಎಂದರು.
ರಾಜ್ಯಾದ್ಯಂತ ಎಲ್ಲಾ ಆರ್ಟಿಸಿ-ಆಧಾರ್ ಜೋಡಣೆ ಕೆಲಸ ಮುಗಿದರೆ ನಕಲಿಗೆ ಅವಕಾಶ ಇರುವುದಿಲ್ಲ. ಬೆಳೆ ಪರಿಹಾರ ನೀಡುವಲ್ಲಿ ಗೊಂದಲ ಇರಲ್ಲ.ಮ್ಯುಟೇಷನ್ ಸೇರಿದಂತೆ ಎಲ್ಲಾ ಸರ್ಕಾರಿ ಸೇವೆಗಳನ್ನೂ ಸುಲಭವಾಗಿ ಮನೆ ಬಾಗಿಲಿಗೆ ತಲುಪಿಸಬಹುದು ಎಂದರು

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಳ ರಾಜೇಂದರ್ ಕುಮಾರ್ ಕಟಾರಿಯಾ, ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್, ಕಂದಾಯ ಆಯುಕ್ತರ ಸುನೀಲ್ ಕುಮಾರ್ ಹಾಗೂ ಸರ್ವೇ ಇಲಾಖೆ ಆಯುಕ್ತ ಮಂಜುನಾಥ್ ಉಪಸ್ಥಿತರಿದ್ದರು.

Leave a Reply