ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಇವರ ಸೇವೆ ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಟಿ.ಎಸ್.ಶ್ರೀವತ್ಸ ಪ್ರಶ್ನೆಗೆ ಉತ್ತರಿಸಿದ ಅವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು.
ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನವರ್ಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದರು.
ಕಾರ್ಯಕರ್ತರನ್ನು ಕಾರ್ಮಿಕ ಇಲಾಖೆಯ ಕನಿಷ್ಠ ವೇತನಕ್ಕೊಳಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರ್ಥಿಕ ಇಲಾಖೆಯ ಅನುಮೋದನೆಯಂತೆ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು.
ನಯನ ಮೋಟಮ್ಮ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಅನಾಥಾಶ್ರಮಗಳಲ್ಲಿ ಇರುವ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ದಾಖಲಾಗುವ ಸಂದರ್ಭದಲ್ಲಿ ಸಾಮಾನ್ಯವರ್ಗದ ಇತರ ಮಕ್ಕಳಂತೆ ಈ ಮಕ್ಕಳನ್ನು ದಾಖಲಾತಿ ಮಾಡಲಾಗುತ್ತಿದೆ.ಇದರ ಬದಲು ಇಂಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದರು.
ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನಾಥ, ನಿರ್ಗತಿಕ ಹಾಗೂ ಒಪ್ಪಿಸಲ್ಪಟ್ಟ ಮಕ್ಕಳು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ದಾಖಲಾಗುತ್ತಿದ್ದು, ಕೆಲವು ಮಕ್ಕಳಿಗೆ ಸಂಬಂಧಿಸಿದಂತೆ ತಮ್ಮ ಕೌಟುಂಬಿಕ ಹಿನ್ನೆಲೆ ಹಾಗೂ ಜಾತಿಯ ಮಾಹಿತಿ ಇರುವುದಿಲ್ಲ. ಜಿಲ್ಲಾ ಶಸ್ತ್ರ ಚಿಕಿತ್ಸಕರ ವೈದ್ಯಕೀಯ ತಪಾಸಣೆ ಮತ್ತು ವರದಿಯಂತೆ ಮಗುವಿನ ವಯಸ್ಸನ್ನು ದೃಢೀಕರಿಸಲಾಗುತ್ತದೆ ಎಂದರು.
ಈ ಮಕ್ಕಳು ಪದವಿ ಪೂರ್ವ ಶಿಕ್ಷಣದವರೆಗೂ ಶಿಕ್ಷಣ ಮುಂದುವರಿಸಲು ಯಾವುದೇ ಸಮಸ್ಯೆಗಳು ಕಂಡು ಬರುವುದಿಲ್ಲ. ಆದರೆ, ಪದವಿ ಪೂರ್ವ ಶಿಕ್ಷಣದ ಬಳಿಕ ವೃತ್ತಿಪರ ಕೋರ್ಸ್‌ಗಳಿಗೆ ಸೇರುವ ಸಂದರ್ಭದಲ್ಲಿ ತಮ್ಮ ಜಾತಿ ಹಿನ್ನಲೆಯ ಮಾಹಿತಿ ಲಭ್ಯವಿಲ್ಲದೇ ಇರುವ ಮಕ್ಕಳನ್ನು ಸಾಮಾನ್ಯ ವಿಭಾಗದಲ್ಲಿ ದಾಖಲು ಮಾಡಲಾಗುತ್ತಿದೆ. ಜೊತೆಗೆ ಅರ್ಹತೆ ಇರುವ ಎಲ್ಲಾ ಮಕ್ಕಳಿಗೂ ಉನ್ನತ ಶಿಕ್ಷಣವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.




