ಬೆಂಗಳೂರು: ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಎರಡನೇ ದಿನ ಪೂರ್ಣಗೊಳಿಸಿ ಮೂರನೇ ದಿನಕ್ಕೆ ಕಾಲಿಟ್ಟಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಎರಡನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರ ನಡೆಸಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದರು.
ದೀನದಲಿತರು, ಪರಿಶಿಷ್ಟ ಜಾತಿ, ಪಂಗಡದ ಪರವಾಗಿ, ಬಡ ಜನರ ಪರವಾಗಿ ಪ್ರಶ್ನಿಸಿದ ವಿಪಕ್ಷಕ್ಕೆ ಉತ್ತರ ಕೊಡಬೇಕಾದ ಆಡಳಿತ ಪಕ್ಷದವರು ವಿಪಕ್ಷಕ್ಕೇ ಮರುಪ್ರಶ್ನೆ ಹಾಕುತ್ತಿದ್ದಾರೆ ಎಂದರು.
ಮಾನ್ಯ ಮುಖ್ಯಮಂತ್ರಿಯವರೇ, ನೀವು ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಹಿಂದದ ಅಭಿವೃದ್ಧಿ ಹೆಸರಿನಿಂದ ಅಧಿಕಾರಕ್ಕೆ ಬಂದಿದ್ದೀರಿ. ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದನ್ನು ಸ್ವತಃ ಮುಖ್ಯಮಂತ್ರಿಗಳಾದ ನೀವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ವಾಲೀಕಿ ನಿಗಮದಲ್ಲಿ ಹಗರಣ ಆದುದನ್ನು ಒಪ್ಪಿಕೊಂಡಿದ್ದೀರಲ್ಲವೇ? ನೀವು ನಮಗೆ ಉತ್ತರ ಕೊಡಬೇಕಿದೆ ಎಂದರು.




