ದೊಡ್ಡ ಹುದ್ದೆಯಲ್ಲಿರುವ ಪ್ರಧಾನಿ ಸುಳ್ಳು ಆರೋಪ ಮಾಡಿರುವುದು ಬೇಸರ: ಆರ್.ಬಿ.ತಿಮ್ಮಾಪುರ
ಬೆಂಗಳೂರು: ಅತ್ಯಂತ ದೊಡ್ಡ ಹುದ್ದೆಯಲ್ಲಿರುವ ಪ್ರಧಾನಿಗಳು ಈ ರೀತಿಯ (ಅಬಕಾರಿ ಇಲಾಖೆಯಲ್ಲಿ 700 ಕೋಟಿ ಅವ್ಯವಹಾರ) ಸುಳ್ಳು ಆರೋಪ ಮಾಡಿರುವುದು ಬೇಸರ ತಂದಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ತಮ್ಮ ವಿರುದ್ಧ ಪ್ರಧಾನಿ ಮೋದಿ ಮಾಡಿರುವ ಆರೋಪಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ತಮ್ಮ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದೆ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದೇನೆ. ಇದರಿಂದ ಕೆಲವರಿಗೆ ತೊಂದರೆಯಾಗಿದ್ದು, ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಇದನ್ನೇ ಆಧಾರವಾಗಿಟ್ಟುಕೊಂಡು ಪ್ರಧಾನಿಗಳು ಮಾತನಾಡಿರುವುದು ಖಂಡನೀಯ ಎಂದರು.




