ಮಾ. 15ರ ವರೆಗೆ ಮದ್ಯ ಮಾರಾಟ ನಿಷೇಧ

1 year ago

ಕೊಪ್ಪಳ: ಹೋಳಿ ಹಬ್ಬದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಲಿಲ್ ಅತುಲ್ ಆದೇಶ ಹೊರಡಿಸಿದ್ದಾರೆ.

15ರ ವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಕಾಮದಹನ ಮತ್ತು ಹೋಳಿ ಹಬ್ಬದ ಸಮಯದಲ್ಲಿ ಶಾಂತತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಿಗೊಳಪಟ್ಟಂತೆ ಮದ್ಯ ಮಾರಾಟವನ್ನು ನಿಷೇಧಿಸಬೇಕೆಂದು ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರ ಕೋರಿಕೆ ಮೇರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರನ್ವಯ ಜಿಲ್ಲೆಯ ಕೊಪ್ಪಳ ನಗರ, ಮುನಿರಾಬಾದ್, ಆಳವಂಡಿ, ಕೊಪ್ಪಳ ಗ್ರಾಮೀಣ, ಕುಕನೂರು, ಗಂಗಾವತಿ ಗ್ರಾಮೀಣ, ತಾವರೆಗೇರಾ, ಹನುಮಸಾಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಮಾ.13ರ ಸಂಜೆ 5 ಗಂಟೆಯಿಂದ ಮಾ.14ರ ಮಧ್ಯರಾತ್ರಿಯವರೆಗೆ ಹಾಗೂ ಯಲಬುರ್ಗಾ, ಬೇವೂರು, ಗಂಗಾವತಿ ನಗರ, ಕಾರಟಗಿ, ಕನಕಗಿರಿ ಮತ್ತು ಕುಷ್ಟಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಮಾ. 14ರ ಸಂಜೆ 5 ಗಂಟೆಯಿಂದ ಮಾ.15ರ ಮಧ್ಯರಾತ್ರಿಯವರೆಗೆ ಮದ್ಯಮಾರಾಟವನ್ನು ನಿಷೇಧಿಸಲಾಗಿದೆ.

ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕರ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply