ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು. ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮದಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದು ಅವರ ಕೊಡುಗೆಯನ್ನು ಸ್ಮರಿಸಿದರು.
ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ (ವಿಲ್) ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.




