ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ ಇತರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಪ್ರಕರಣದಲ್ಲಿ ಜಾಮೀನು ಪಡೆದಿರುವ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಇತರೆ 7 ಮಂದಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ. ಇದರಿಂದ ಜಾಮೀನು ಪಡೆದು ಜೈಲಿನಲ್ಲಿ ಹೊರಬಂದು ನೆಮ್ಮದಿಯಾಗಿದ್ದ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಆತಂಕ ಶುರುವಾಗಿದೆ.
ಹೈಕೋರ್ಟ್ ನೀಡಿರುವ ಜಾಮೀನು ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಆರ್ ಮಹದೇವನ್ ಅವರ ವಿಭಾಗೀಯ ಪೀಠ ನಟ ದರ್ಶನ್ ಸೇರಿ 7 ಮಂದಿಗೆ ನೋಟೀಸ್ ಜಾರಿ ಮಾಡಿದೆ.
ಪ್ರಾಸಿಕ್ಯೂಷನ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದರು. ಹೈಕೋರ್ಟ್ ನೀಡಿರುವ ಜಾಮೀನು ತೀರ್ಪನ್ನು ಬೇರೆಯವರು ಬಳಕೆ ಮಾಡಿಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್‌ಗೆ ಕಾರಣ ಕೊಟ್ಟರು. ಆದರೆ, ಸುಪ್ರೀಂ ಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡಲಾಗದು ಎಂದು ಹೇಳಿ ನೋಟಿಸ್ ಜಾರಿ ಮಾಡಿತು.
ಬೇರೆ ಆರೋಪಿಗಳು ಜಾಮೀನು ಕೋರಿದರೆ ಹೈಕೋರ್ಟ್‌ನ ಆದೇಶವನ್ನು ಆಧರಿಸಬಾರದು ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಮುಂದೂಡಿತು.
ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿಗಳಿಗೆ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಕೋರ್ಟ್‌ನ ತೀರ್ಮಾನಕ್ಕೆ ಬೆಂಗಳೂರು ಪೊಲೀಸರು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿ ಅಗತ್ಯ ಸಿದ್ಧತೆ ಮಾಡಿಕೊಂಡು ಸುಪ್ರೀಂ ಕೋರ್ಟ್‌ಗೆ ಜನವರಿ ಮೊದಲ ವಾರದಲ್ಲಿ ಅರ್ಜಿ ಸಲ್ಲಿಸಿದ್ದರು. ಸರ್ಕಾರವು ವಕೀಲರನ್ನು ನೇಮಕ ಮಾಡಿತ್ತು.
ಪವಿತ್ರಾ ಗೌಡ (ಎ 1)ದರ್ಶನ್ (ಎ 2)ಜಗದೀಶ್ ಜಗ್ಗ ಅಲಿಯಾಸ್ ಜಗ್ಗ (ಎ 6)ಅನುಕುಮಾರ್ ಅಲಿಯಾಸ್ ಅನು (ಎ 7)ಆರ್ ನಾಗರಾಜು (ಎ 11)ಎಂ ಲಕ್ಷ್ಮಣ್ (ಎ 12)ಪ್ರದೋಶ್ ಎಸ್. ರಾವ್ (ಎ 14)ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದರೆ ಕೂಡಲೇ ಬಂಧನವಾಗಿ ಮತ್ತೆ ಜೈಲು ಸೇರಬೇಕಾಗುತ್ತದೆ. ಹೀಗಾಗಿ, ನಟ ದರ್ಶನ್ ಹಾಗೂ ಅಭಿಮಾನಿಗಳು ಸುಪ್ರೀಂ ಕೋರ್ಟ್ ವಿಚಾರಣೆ ಮೇಲೆ ನಿಗಾ ಇಟ್ಟಿದ್ದಾರೆ.




