ಬಳ್ಳಾರಿ: ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು. ಅರ್ಜಿಗಳನ್ನು ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ ಮೇ 21 ರೊಳಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




