ಬಳ್ಳಾರಿ: 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಡೂರು ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ಅನ್ನಪೂರ್ಣ ಅವರಿಗೆ ಕೈ ಚಿಹ್ನೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಂಗಾರ ಹನುಮಂತ ಅವರಿಗೆ ಕಮಲ ಚಿಹ್ನೆ ನೀಡಲಾಗಿದೆ.
ಅದರಂತೆ ನೋಂದಾಯಿತ ರಾಜಕೀಯ ಪಕ್ಷಗಳಾದ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಅಂಜಿನಪ್ಪ.ಎನ್ ಅವರಿಗೆ ವಜ್ರ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಟಿ.ಎಂ.ಮಾರುತಿ ಅವರಿಗೆ ಬ್ಯಾಟರಿ ಚಾರ್ಜ್, ಟಿ.ಯರ‍್ರಿಸ್ವಾಮಿ ಅವರಿಗೆ ಟ್ರಕ್, ಎನ್.ವೆಂಕಣ್ಣ ಅವರಿಗೆ ಉಂಗುರ ಚಿಹ್ನೆ ನೀಡಲಾಗಿದ್ದು, ನ.13 ರಂದು ಮತದಾನ ನಡೆಯಲಿದೆ.




