ಸಂಡೂರು ವಿಧಾನಸಭೆ ಉಪಚುನಾವಣೆ: ಮದ್ಯ ಮಾರಾಟ ನಿಷೇಧ

1 year ago

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.13ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ) ನಿಯಮಗಳು, 1967ರ ನಿಯಮ 10-ಬಿ ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಂಡೂರು ಕ್ಷೇತ್ರದಲ್ಲಿ ಹಾಗೂ ಈ ಕ್ಷೇತ್ರಕ್ಕೆ ಹೊಂದಿಕೊಂಡ ಕಂಪ್ಲಿ, ಕುರುಗೋಡು ಮತ್ತು ಬಳ್ಳಾರಿ ತಾಲ್ಲೂಕಗಳ 05 ಕಿ.ಮೀ ವ್ಯಾಪ್ತಿಯಲ್ಲಿ ನ.11ರ ಸಂಜೆ 06 ಗಂಟೆಯಿಂದ ನ.14ರ ಬೆಳಿಗ್ಗೆ 06 ಗಂಟೆವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಲಾಗಿದೆ.

Leave a Reply