ಬೆಂಗಳೂರು: ನಿವೇಶನ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮೈಸೂರಿನ ಬೆಂಗಳೂರಿನಿಂದ ಮೈಸೂರಿಗೆ ನಡೆಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನ ಪಾದಯಾತ್ರೆ ಭ್ರಷ್ಟಾಚಾರದ ವಿರುದ್ಧದ ದಂಡಯಾತ್ರೆ ಆರೂವರೆ ಕೋಟಿ ಕನ್ನಡಿಗರ ಜನಾಕ್ರೋಶಕ್ಕೆ ದನಿಗೂಡಿಸುವ ಈ ಪ್ರಜಾಯಾತ್ರೆ ಅನೈತಿಕತೆಯ ವಿರುದ್ಧ ನೈತಿಕತೆಯ ಮೌನಯಾತ್ರೆ. ಅಧರ್ಮ ರಾಜಕಾರಣದ ವಿರುದ್ಧ ಧರ್ಮ ರಾಜಕಾರಣದ ಸಂಘರ್ಷ ಯಾತ್ರೆ. ಅಸತ್ಯದ ವಿರುದ್ಧ ಸತ್ಯದ ನ್ಯಾಯಯಾತ್ರೆ ಎಂದಿದ್ದಾರೆ.
ಸಿದ್ದರಾಮಯ್ಯನವರ ಅಕ್ರಮಗಳ ವಿರುದ್ಧ ಎನ್ ಡಿ ಎ ಮಿತ್ರಕೂಟ ಹಮ್ಮಿಕೊಂಡಿರುವ ಜನಾಂದೋಲನಕ್ಕೆ ನಾಳೆ, ಶನಿವಾರ ಅಗಸ್ಟ್ 3ರಂದು ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯನವರೇ, ಈಗಲೂ ಕಾಲ ಮಿಂಚಿಲ್ಲ. ತಮಗೆ ಕಿಂಚಿತ್ತಾದರೂ ನೈತಿಕತೆ, ಆತ್ಮಸಾಕ್ಷಿ, ಅಂತಃಕರಣ ಅನ್ನುವುದು ಇದ್ದರೆ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ. ಈಗ ಪ್ರಾಯಶ್ಚಿತ ಮಾಡಿಕೊಳ್ಳದಿದ್ದರೆ ಮುಂದೆ ಪಶ್ಚಾತ್ತಾಪಕ್ಕೂ ಅವಕಾಶ ಇರುವುದಿಲ್ಲ ಎಂದಿದ್ದಾರೆ.




