ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ತರ ರಕ್ಷಣೆ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಸಿದ್ದರಾಮಯ್ಯ ದೂರವಾಣಿ ಮೂಲಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ಇಂದು ಬೆಳಿಗ್ಗೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್, ಸದ್ಯ ಕೇರಳ ರಾಜ್ಯದ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮತ್ತು ಮುಖ್ಯಮಂತ್ರಿ ಕಚೇರಿ ಹಾಗೂ ರಕ್ಷಣಾ ನಿರತ ವಿವಿಧ ಹಂತಗಳ ಅಧಿಕಾರಿ ವರ್ಗ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಇಂತಹ ಸಂಧರ್ಭದಲ್ಲಿ ಮಾನವೀಯ ಸಹಾಯ ಹಸ್ತ ಚಾಚುವುದರೊಂದಿಗೆ, ಮಾಹಾವಿಕೋಪಕ್ಕೆ ತುತ್ತಾಗಿರುವ ಜನತೆಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಸಂತೋಷ್ ಲಾಡ್ ತಿಳಿಸಿದ್ದಾರೆ.




