ಸ್ಯಾಂಟ್ರೊ ರವಿ ಪ್ರಕರಣ: ರಾಜಕೀಯ ನಾಯಕರ ನಡುವಣ ವಾಕ್ ಸಮರಕ್ಕೆ ವೇದಿಕೆ

3 years ago

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಸ್ಯಾಂಟ್ರೊ ರವಿ ಪ್ರಕರಣ ಇದೀಗ ರಾಜಕೀಯ ನಾಯಕರ ನಡುವಣ ವಾಕ್ ಸಮರಕ್ಕೆ ವೇದಿಕೆ ಸೃಷ್ಟಿಸಿದೆ.

ಸ್ಯಾಂಟ್ರೊ ರವಿ ತಮ್ಮ ಮನೆಯಲ್ಲಿ ಹಣ ಎಣಿಕೆ ಮಾಡುತ್ತಿರುವ ಫೋಟೊ ವೈರಲ್ ಆಗಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಕೆರಳಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ನನ್ನ ಮನೆಗೆ ಬಂದು ಹಣದ ಗಂಟು ಬಿಚ್ಚುವ ಧೈರ್ಯ ತೋರಲು ಯಾರಿಗೂ ಈವರೆಗೆ ಅವಕಾಶ ನೀಡಿಲ್ಲ. ರಾಜಕೀಯವಾಗಿ ಹತಾಶರಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ‌. ಕುಮಾರಸ್ವಾಮಿ ಅವರು ಸುಳ್ಳು ಆರೋಪದ ಮೂಲಕ ನನ್ನ ತೇಜೋವಧೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ

ನಾನು ಜೀವನದಲ್ಲಿ ನೈತಿಕತೆ ಪಾಲಿಸಿಕೊಂಡು ಬಂದಿದ್ದೇನೆ. ಯಾವತ್ತೂ, ಯಾರಿಗೂ ನನ್ನ ಮನೆಗೆ ಬಂದು ಹಣದ ಗಂಟು ಬಿಚ್ಚುವ ಅವಕಾಶ ನೀಡಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮೇಲಿನ ಆರೋಪ ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.

ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅತ್ಯಂತ ಬೇಜವಾಬ್ದಾರಿಯಿಂದ ಹಸಿ ಸುಳ್ಳು ಹೇಳುವ ಮೂಲಕ ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂಬುದು ವೇದ್ಯವಾಗುತ್ತದೆ. ಕುಮಾರಸ್ವಾಮಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಹೀಗೆ ಮಾಡುವುದರಿಂದ ಅವರಿಗೆ ಏನು ಲಾಭ ಇದೆಯೋ ಗೊತ್ತಿಲ್ಲ ಎಂದರು.

ಸ್ಯಾಂಟ್ರೊ ರವಿ ಹಿನ್ನೆಲೆ ಕುರಿತು ತನಿಖೆ ನಡೆಸಿ ವಿಚಾರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಗೃಹ ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಮಾಜದ ಕಟ್ಟಕಡೆಯ ಜನರೂ ಸೇರಿದಂತೆ ಪ್ರತಿನಿತ್ಯ ನೂರಾರು ಮಂದಿ ಭೇಟಿ ಮಾಡುತ್ತಾರೆ. ಪ್ರತಿಯೊಬ್ಬರ ಹಿನ್ನೆಲೆಯನ್ನು ಸೋಸಿ ನೋಡಲು ಆಗುವುದಿಲ್ಲ ಎಂದರು.

Leave a Reply