ಪ್ರಮಾಣ ಪತ್ರ- ಖಾಯಂ ನೇಮಕಾತಿ ಆದೇಶ ಪತ್ರಗಳ ವಿತರಣಾ ಸಮಾರಂಭ
ಬೆಳಗಾವಿ: ಪ್ರಧಾನ ಮಂತ್ರಿ ಪೋಷನ್ ಶಕ್ತಿ ನಿರ್ಮಾಣ ಅಭಿಯಾನ (ಮಧ್ಯಾಹ್ನ ಉಪಹಾರ ಯೋಜನೆ) ಅಡಿಯಲ್ಲಿ ಸುಮಾರು 20 ವರ್ಷಗಳವರೆಗೆ “ಅಡುಗೆದಾರರಾಗಿ” ಸೇವೆ ಸಲ್ಲಿಸಿ, 60 ವರ್ಷ ಪೂರ್ಣಗೊಂಡ ಆಯ್ದ ಸಿಬ್ಬಂದಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಭಿನಂದನಾ ಪ್ರಮಾಣ ಪತ್ರವನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ವಿತರಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆದೇಶದ ಅನ್ವಯ 60 ವರ್ಷ ಮೀರಿದ ಅಡುಗೆ ಸಿಬ್ಬಂದಿಗೆ ಈ ಹಿಂದೆ ಯಾವುದೇ ಆರ್ಥಿಕ ಸೌಲಭ್ಯವನ್ನು ನೀಡುತ್ತಿರಲಿಲ್ಲ. ಪ್ರಪ್ರಥಮವಾಗಿ ಕರ್ನಾಟಕದಲ್ಲಿ ಕರ್ನಾಟಕ ಸರಕಾರ 60 ವರ್ಷ ಪೂರ್ಣಗೊಳಿಸಿ ನಿವೃತ್ತಿಯಾಗುವ ಸಿಬ್ಬಂದಿಗೆ ಇಡುಗಂಟು ನೀಡಲಾಗುತ್ತಿದ್ದು, ಸರಕಾರದ ಅತ್ಯಂತ ಮಹತ್ವದ ನಿರ್ಣಯವಾಗಿದೆ ಎಂದರು.
5 ರಿಂದ 15 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಅಡುಗೆಯವರಿಗೆ ರೂ.30 ಸಾವಿರ ಹಾಗೂ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿ ನಿವೃತ್ತರಾದ ಸಿಬ್ಬಂದಿಗೆ ರೂ.40 ಸಾವಿರ ಇಡುಗಂಟು ಮಂಜೂರು ಮಾಡಲಾಗಿದೆ. ಸಹಾಯ ಧನವನ್ನು ಭವಿಷ್ಯಕ್ಕೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಸರ್ಕಾರದ ಸೇವಾ ಭದ್ರತೆ ಕೂಡ ಈ ಆದೇಶದಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನಿರಂತರ ಇಂತಹ ಜನಪರ ಕೊಡುಗೆಗಳನ್ನು ನೀಡುತ್ತಾ ಬಂದಿದೆ ಎಂದರು.
ಆದೇಶ ಪತ್ರ ವಿತರಣೆ: ಇದಕ್ಕೂ ಮುಂಚೆ ಅಡುಗೆ ಸಿಬ್ಬಂದಿಗಳಿಗೆ ಅಭಿನಂದನಾ ಪತ್ರ, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತ್ ಸಿಬ್ಬಂದಿಗೆ ಅನುಮೋದನೆ ಆದೇಶ ಪತ್ರ, ಅನುಕಂಪ ಆಧಾರದ ಮೇಲೆ ನೇಮಕಾತಿ ಹೊಂದಿರುವ ಮಡಿದ ನೌಕರರ ಕುಟುಂಬದ ಸದಸ್ಯರಿಗೆ ಆದೇಶ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪರುಶುರಾಮ ದುಡಗುಂಟಿ ಹಾಜರಿದ್ದರು.




