ಭರತ್ ಬೊಮ್ಮಾಯಿ ವಿರುದ್ಧ ಯಾಸೀರ ಅಹಮದ್ ಖಾನ್ ಪಠಾಣ್ ಗೆಲುವು
ಹಾವೇರಿ \ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಮೂರಕ್ಕೆ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ವಿಜಯ ಸಾಧಿಸುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಭಾರಿ ಮುಖಭಂಗ ಮಾಡಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಮಾಜಿ ಸಿಎಂ ಮತ್ತು ಹಾವೇರಿಯ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಮೊದಲ ಬಾರಿಗೆ ಚುನಾವಣೆಯ ಅಖಾಡ ಪ್ರವೇಶಿಸಿದ್ದರು. ಈ ಕ್ಷೇತ್ರದಲ್ಲಿ ಎಸ್ ಆರ್ ಬೊಮ್ಮಾಯಿ ಆಯ್ಕೆಯಾಗಿ ಸಿಎಂ ಆಗಿದ್ದರು. ಅದಾದ ನಂತರ ಅವರ ಪುತ್ರ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿ ಸಿಎಂ ಆಗಿದ್ದರು. ಈಗ ಅವರ ಮೊಮ್ಮಗ ಅದೃಷ್ಟ ಪರೀಕ್ಷೆಗೆ ಇಳಿಯುವ ಮೂಲಕ ಗಮನ ಸೆಳೆದಿದ್ದರು.
ಕಾಂಗ್ರೆಸ್ ಎಂದಿನಂತೆ ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಮಣೆ ಹಾಕಿದ ಪರಿಣಾಮ ಭರತ್ ಬೊಮ್ಮಾಯಿ ಅವರ ಗೆಲುವು ಸುಲಭ ಎಂದು ವ್ಯಾಖ್ಯಾನ ಮಾಡಲಾಗಿತ್ತು. ಆದರೆ ಫಲಿತಾಂಶ ಈ ಲೆಕ್ಕಾಚಾರವನ್ನು ತಲೆಕೆಳಗು ಮಾಡಿದೆ. ಆರಂಭಿಕ ಹಂತಗಳಲ್ಲಿ ಭರತ್ ಬೊಮ್ಮಾಯಿ ಸಾಕಷ್ಟು ಮುನ್ನಡೆ ಸಾಧಿಸಿದ್ದರು. ಇದರಿಂದ ತಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಭಾವಿಸಿದ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಣೆಯ ಸಿದ್ಧತೆಯಲ್ಲಿ ತೊಡಗಿದ್ದರು.
ಆದರೆ ಹತ್ತನೇ ಸುತ್ತಿನ ನಂತರ ಕಾಂಗ್ರೆಸ್ಸಿನ ಅಭ್ಯರ್ಥಿ ಮುನ್ನಡೆ ಸಾಧಿಸುತ್ತಾ ಸಾಗಿದರು. ಅಂತಿಮವಾಗಿ ಕಾಂಗ್ರೆಸ್ನ ಯಾಸೀರ ಅಹಮದ್ ಖಾನ್ ಪಠಾಣ ಅವರು 1,00,756 ಮತ ಪಡೆದರೆ, ಬಿಜೆಪಿಯ ಭರತ್ ಬೊಮ್ಮಾಯಿ 87,308 ಮತ ಪಡೆದು ಪರಾಭವಗೊಂಡಿದ್ದಾರೆ. ಕಾಂಗ್ರೆಸ್ 13,448ಮತಗಳ ಅಂತರದಿಂದ ಗೆಲುವು ಸಾಧಿಸಿದರು.
ಈ ಗೆಲುವಿನ ಶ್ರೇಯಸ್ಸು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಲ್ಲುತ್ತಿದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಶಿಗ್ಗಾಂವಿಯ ಚುನಾವಣೆಯ ಹೊಣೆಯನ್ನು ಸಿಎಂ ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿಯವರ ಹೆಗಲಿಗೆ ಏರಿಸಿದ್ದರು. ಸೊಂಡೂರು ಕ್ಷೇತ್ರದ ಜವಾಬ್ದಾರಿಯನ್ನು ನೀಡಲಾಗುತ್ತದೆ ಎಂಬುದು ಎಲ್ಲರ ಲೆಕ್ಕಾಚಾರವಾಗಿತ್ತು. ಆದರೆ ಇದನ್ನು ತಲೆಕೆಳಗಾಗಿಸಿ ಶಿಗ್ಗಾಂವಿ ಹೊಣೆಯನ್ನು ಸತೀಶ್ ಅವರ ಹೆಗಲಿಗೇರಿಸಲಾಗಿತ್ತು. ಹೇಳಿಕೇಳಿ ಚುನಾವಣಾ ತಂತ್ರಜ್ಞರಾದ ಸತೀಶ್ ಜಾರಕಿಹೊಳಿ ಪ್ರತಿ ಗ್ರಾಮಪಂಚಾಯತ್ ಮಟ್ಟದಲ್ಲಿ ಜವಾಬ್ದಾರಿಯನ್ನು ಹಂಚಿ ಸುತ್ತಾಟ ನಡೆಸಿ ಪಕ್ಷದ ಗೆಲುವಿಗೆ ರಣತಂತ್ರ ರೂಪಿಸಿದ್ದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಲ್ಲಿ ಚಿತ್ರ ನಟ ಸುದೀಪ್ ಅವರನ್ನು ಕರೆತಂದು ಬರೆದುಕೊಟ್ಟ ಭಾಷಣವನ್ನು ಬಸವರಾಜ ಬೊಮ್ಮಾಯಿ ಓದಿಸಿದ್ದರು. ಇದೀಗ ಬೊಮ್ಮಾಯಿಯವರ ತವರಿನಲ್ಲೇ ಅವರ ಪುತ್ರನನ್ನು ಮಣಿಸಿದ ಸತೀಶ್ ಜಾರಕಿಹೊಳಿ ತಾವು ಪಕ್ಷ ಕೊಡುವ ಯಾವುದೇ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸುವ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.




