ಬೆಳಗಾವಿಯಲ್ಲಿ ವಾಲ್ಮೀಕಿ ಬೇಡರ ಸಮುದಾಯದ ಕುರಿತು ರಮೇಶ ಕತ್ತಿ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಮೇಲ್ನೋಟಕ್ಕೆ ಅದು ನಿಜವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಇಂತಹ ಅಸಂವೇದನಾಶೀಲ ಮಾತುಗಳು ಸಮಾಜದ ಸೌಹಾರ್ದತೆ ಮತ್ತು ಸಂವಿಧಾನಾತ್ಮಕ ಮೌಲ್ಯಗಳಿಗೆ ಗಂಭೀರ ಧಕ್ಕೆ ತರುತ್ತವೆ. ಆದ್ದರಿಂದ, ಕಾನೂನಿನ ಪ್ರಕಾರ ತನಿಖೆಯನ್ನು ಕೈಗೊಂಡು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಕೂಡ ಆಗ್ರಹಿಸುತ್ತೇನೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಜಾತಿಯಂತಹ ವಿಷವನ್ನು ಬೇರುಸಹಿತ ನಿರ್ಮೂಲನೆಗೊಳಿಸಲು ತಮ್ಮ ಜೀವನವನ್ನೇ ಅರ್ಪಿಸಿದ ಮಹಾನ್ ತತ್ವಜ್ಞಾನಿಗಳು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ “ಸಮಾನತೆ, ಮಾನವೀಯತೆ ಮತ್ತು ಸಹೋದರತೆ” ಎಂಬ ಸಿದ್ಧಾಂತಗಳೇ ನಮ್ಮ ಮಾರ್ಗ ಮತ್ತು ದಾರಿದೀಪವಾಗಬೇಕು — “ನಾ ಹೆಚ್ಚು, ನೀ ಹೆಚ್ಚು” ಎಂಬ ಜಾತಿಯ ವಿಷವಲ್ಲ.
– ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಸಚಿವ




