ಬೆಂಗಳೂರು: ಕಬ್ಬಿಣ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಬಂಧಿತ ಕಾರವಾರ – ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಸೆಪ್ಟೆಂಬರ್ 12ರವರೆಗೆ ಜಾರಿ ನಿರ್ದೇಶನಾಲಯ (ಇಡಿ)ದ ಕಸ್ಟಡಿಗೆ ನೀಡಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಬಂಧಿತ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬುಧವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ಸೈಲ್ ಅವರನ್ನು ಸೆ.12ರವರೆಗೆ ಎರಡು ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಸತೀಶ್ ಸೈಲ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿತ್ತು.
ಪ್ರಕರಣದಲ್ಲಿ ಅಕ್ರಮವಾಗಿ ಹಣದ ವರ್ಗಾವಣೆ ಸಹ ಕಂಡುಬಂದ ಹಿನ್ನೆಲೆಯಲ್ಲಿ, ಇಸಿಐಅರ್ ದಾಖಲಿಸಿಕೊಂಡಿದ್ದ ಇ.ಡಿ ಅಧಿಕಾರಿಗಳು ಪ್ರತ್ಯೇಕ ತನಿಖೆ ಆರಂಭಿಸಿದ್ದರು. ಆಗಸ್ಟ್ 13 ಮತ್ತು 14ರಂದು ಸತೀಶ್ ಸೈಲ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ ನಡೆಸಿದಾಗ ನಗದು, ಚಿನ್ನಾಭರಣ ಸಹಿತ 13 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿವೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದರು. ಬಳಿಕ ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ಸತೀಶ್ ಸೈಲ್ ಅವರಿಗೆ ನೋಟಿಸ್ ನೀಡಿದ್ದರು.




