ಕೋರ್ಟ್ ಮೆಟ್ಟಿಲೇರಿತು ಸಾವರ್ಕರ್ ಬುಲ್ ಬುಲ್ ಏರಿದ ಪಠ್ಯ ವಿಷಯ!

3 years ago

ಬೆಂಗಳೂರು: ಶಾಲಾ ಪಠ್ಯ ಪುಸ್ತಕದಲ್ಲಿ ಸಂಘ ಪರಿವಾರದ ನಾಯಕ ಸಾವರ್ಕರ್ ಕುರಿತಾದ ‌ವಿಷಯ ಇದೀಗ ತೀವ್ರ ವಿವಾದದ ಸ್ವರೂಪ ಪಡೆದಿದ್ದು ನ್ಯಾಯಾಲಯದ ‌ಮೆಟ್ಟಿಲೇರಿದೆ.

ವಿನಾಯಕ ದಾಮೋದರ ಸಾವರ್ಕರ್ ಅವರನ್ನು ಬ್ರಿಟಿಷರು ಬಂಧಿಸಿಟ್ಟಿದ್ದ ಅಂಡಮಾನ್ ಜೈಲಿನ ಕೋಣೆಗೆ ಬುಲ್‌ಬುಲ್‌ ಹಕ್ಕಿಗಳು ಬರುತ್ತಿದ್ದವು. ಅವುಗಳ ಮೇಲೆ ಕುಳಿತು ಸಾವರ್ಕರ್ ಪ್ರತಿ ದಿನ ತಾಯ್ನಾಡಿನ ನೆಲವನ್ನು ಸಂಪರ್ಕಿಸಿ ಬರುತ್ತಿದ್ದರು ಎಂದು ಪಠ್ಯಪುಸ್ತಕಗಳಲ್ಲಿ ಉಲ್ಲೇಖ ಮಾಡಿರುವುದಕ್ಕೆ, ಕರ್ನಾಟಕ ಅನುದಾನರಹಿತ ಶಾಲೆಗಳ ನಿರ್ವಹಣೆಗಳ ಸಂಘ (ಕುಸ್ಮಾ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಈ ಸಂಬಂಧ ಹೈಕೋರ್ಟ್ ಗೆ ರಿಟ್ ಸಲ್ಲಿಸಿರುವ ಕುಸ್ಮಾ ಪಠ್ಯಕ್ರಮದಲ್ಲಿ ಅಳವಡಿಸಲಾಗಿರುವ ಸಾವರ್ಕರ್ ಬಗೆಗಿನ ಕೆಲ ಸಾಲುಗಳು ಮತ್ತು 1984ರ ದೆಹಲಿ ಸಿಖ್ ಹತ್ಯಾಕಾಂಡದ ಕುರಿತ ಮಾಹಿತಿಗಳನ್ನು ಪ್ರಸ್ತಾಪಿಸಿ; “ನಿಗದಿಪಡಿಸಿದ ಪಠ್ಯಕ್ರಮಕ್ಕಿಂತ ಹೆಚ್ಚೇನೂ ಮಕ್ಕಳಿಗೆ ಕಲಿಸಬಾರದು ಎಂದು ನಿರ್ದೇಶಿಸುವ ನಿಬಂಧನೆಗಳಿಗೆ ಈ ಅಳವಡಿಕೆ ವಿರುದ್ಧವಾಗಿದೆ” ಎಂದು ಹೇಳಿದೆ.

ಸರ್ಕಾರ ಶಾಲಾ ಮಕ್ಕಳನ್ನು ರಾಜಕೀಯ ಪಕ್ಷಗಳಿಗೆ ಭವಿಷ್ಯದ ಮತದಾರರನ್ನಾಗಿ ರೂಪಿಸಲು ಪ್ರಯತ್ನಿಸುತ್ತದೆ. ಇಂತಹ ತಪ್ಪುಗಳನ್ನು ಎತ್ತಿ ತೋರಿಸುವ ಅಧಿಕಾರ ಕುಸ್ಮಾಗೆ ಇದೆ. ಮುಕ್ತ ಮಾರುಕಟ್ಟೆಯು ಸರ್ಕಾರದ ಪ್ರಕಟಣೆಗಳಿಗಿಂತ ಹೆಚ್ಚು ಮಕ್ಕಳ ಸ್ನೇಹಿಯಾಗಿದೆ ಎಂದು ಕೋರ್ಟ್ ಗಮನ ಸೆಳೆದಿದೆ.

ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ ಮತ್ತು ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿದ್ದು ತೀರ್ಪು ಕಾಯ್ದಿರಿಸಿದೆ.

Leave a Reply