ಬೆಂಗಳೂರು: ಝಣ-ಝಣಾ ಕಾಂಚಾಣದಲ್ಲಿ | ಕಾಂಗ್ರೆಸ್ ಸರ್ಕಾರದಲ್ಲಿ | ರಸ್ತೆ ಗುಂಡಿ ಮುಚ್ಚುವ ಹಣವೂ ಮಾಯ | ನಾಳೆ ರಸ್ತೆಯೂ ಮಾಯ | ಎಲ್ಲಾ ಮಾಯಾ ನಾಳೆ ನಾವೂ ಮಾಯ |ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ @DKShivakumar ಅವರೇ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಾರ್ಡ್ ಗೆ ತಲಾ 15 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರಲ್ಲ, ಆ ಹಣವೆಲ್ಲಾ ಏನಾಯ್ತು? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ಯಾಮಸ್ವರೂಪಿ ರಸ್ತೆ ಗುಂಡಿಗಳನ್ನು ನೋಡಿದರೆ ಬಹುಶಃ ಆ ದುಡ್ಡೆಲ್ಲವೂ ತಮ್ಮ ಕಮಿಷನ್ ಪಾಲಾದಂತಿದೆ. ಅಥವಾ ಈಗ ಚನ್ನಪಟ್ಟಣ ಚುನಾವಣೆ ಖರ್ಚಿಗೆ ಆ ಹಣ ಸಾಗಿಸಿದ್ದೀರೋ? ಎಂದಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಕಟ್ಟುವುದು ದೂರದ ಮಾತು ಸ್ವಾಮಿ, ಮೊದಲು ರಸ್ತೆ ಗುಂಡಿ ಮುಚ್ಚಿಸಿ ಜನರ ಪ್ರಾಣ ಉಳಿಸಿ ಎಂದು ಆಗ್ರಹಿಸಿದ್ದಾರೆ.



