ಬೆಂಗಳೂರು: ಹೃದಯಾಘಾತದಿಂದಾಗುವ ಹಠಾತ್ ಸಾವನ್ನು ತಪ್ಪಿಸಲು ನಾವು ಕಳೆದ ವರ್ಷ ಜಾರಿಗೆ ತಂದ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಅಮೂಲ್ಯ ಜೀವಗಳನ್ನು ಸರಿಯಾದ ಸಮಯದಲ್ಲಿ ಕಾಪಾಡಲು ನೆರವಾಗುತ್ತಿದೆ. ಈ ಯೋಜನೆಯಡಿ ಕಳೆದ ನಾಲ್ಕು ತಿಂಗಳಲ್ಲಿ ಸರಿಯಾದ ಸಮಯದಲ್ಲಿ ಜೀವ ರಕ್ಷಕ ಇಂಜೆಕ್ಷನ್ ನೀಡುವ ಮೂಲಕ 10 ಅಮೂಲ್ಯ ಜೀವಗಳಿಗೆ ಮರುಜನ್ಮ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯವನ್ನು ಹೇಳಿರುವ ಅವರು, 25,000 ರೂಪಾಯಿ ವೆಚ್ಚದ ಈ ಇಂಜೆಕ್ಷನ್ ಹೃದಯಾಘಾತದ ಸಮಯದಲ್ಲಿ ಅತ್ಯಮೂಲ್ಯವಾಗಿದ್ದು ಇದನ್ನು ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಉಚಿತವಾಗಿ ನೀಡಲಾಗುತ್ತಿದೆ. ಇಷ್ಟಲ್ಲದೆ ಈ ವರೆಗೆ ಸುಮಾರು 11,000 ಜನರಲ್ಲಿ ಗಂಭೀರ ಹೃದಯ ರೋಗಗಳನ್ನು ಪತ್ತೆ ಹಚ್ಚಲಾಗಿದೆ ಎಂದಿದ್ದಾರೆ.
ಈ ಯೋಜನೆಯು 2 ಹಂತಗಳಲ್ಲಿ ಈಗಾಗಲೇ ಜಾರಿಯಲ್ಲಿದ್ದು ಒಟ್ಟು 16 ಜಿಲ್ಲೆಗಳ 70 ತಾಲೂಕು ಆಸ್ಪತ್ರೆಗಳಲ್ಲಿ ಜಾರಿಯಾಗಿದೆ. ಇನ್ನು 3 ಮತ್ತು 4 ನೇ ಹಂತಗಳಲ್ಲಿ ಉಳಿದ 15 ಜಿಲ್ಲೆಗಳ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎಂದಿದ್ದಾರೆ.




