SC, ST ಗುತ್ತಿಗೆದಾರರ ಸರ್ಕಾರಿ ನಿರ್ಮಾಣ ಕಾಮಗಾರಿಗಳ ಮೊತ್ತ ಕೋಟಿ ರೂಪಾಯಿಗಳಿಗೆ ಹೆಚ್ಚಳ

3 years ago

#SC #ST #contractor #government #construction #works #amount #increased #crore

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುತ್ತಿಗೆದಾರರು  ಕೈಗೊಳ್ಳಲಾಗುವ ಸರ್ಕಾರಿ ನಿರ್ಮಾಣ ಕಾಮಗಾರಿಗಳ ಮೊತ್ತವನ್ನು 50 ಲಕ್ಷ ರೂಪಾಯಿಗಳಿಂದ ಒಂದ ಕೋಟಿ ರೂಪಾಯಿಗಳಿಗೆ ಹೆಚ್ಚಿಸುವ ಕಾನೂನು ವಿಧಾನಸಭೆ ಅಂಗೀಕಾರಗೊಂಡಿದೆ.

ಈ ಸಂಬಂಧ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 2023ಕ್ಕೆ ತಿದ್ದುಪಡಿ ಮಾಡಿದ ವಿಧೇಯಕಕ್ಕೆ ಕರ್ನಾಟಕ ವಿಧಾನಸಭೆ  ಧ್ವನಿಮತದಿಂದ ಅಂಗೀಕಾರ ನೀಡಿದೆ.

ಮುಖ್ಯಮಂತ್ರಿಗಳ ಪರವಾಗಿ ಸದನದಲ್ಲಿ ವಿಧೇಯಕವನ್ನು ಅಂಗೀಕಾರಕ್ಕೆ ಕಾನೂನು,  ಮತ್ತು ಸಂಸದೀಯ ವ್ಯವಹಾರಗಳು,  ಸಚಿವ ಎಚ್.ಕೆ. ಪಾಟೀಲ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು.

ನಂತರ ನಡೆದ ಚರ್ಚೆಗೆ ಉತ್ತರಿಸಿದ ಅವರು, ಈ ಮೊದಲಿನ 50 ಲಕ್ಷ ರೂಪಾಯಿಯ ಅವಕಾಶ ಕಲ್ಪಿಸಿದ ತಿದ್ದುಪಡಿಯ ನಂತರ ಮೊದಲನೇ ಟೆಂಡರ್ ಕರೆಯಲು ಶೇಕಡ 62  ರಷ್ಟು ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಪಂಗಡದವರು ಟೆಂಡರ್ ಗಳಲ್ಲಿ ಪಾಲ್ಗೊಂಡಿದ್ದು, 2ನೇ ಕರೆಯಲ್ಲಿ ಶೆ. 80ರಷ್ಟು ಅನುಸೂಚಿತ ಜಾತಿ ಮತ್ತು ಬುಡಕಟ್ಟು ಪಂಗಡದವರು ಪಾಲ್ಗೊಂಡಿದ್ದಾರೆ ಎಂದು  ವಿವರಿಸಿದರು.

ಸಚಿವರ ವಿವರಣೆ ಮತ್ತು ಉತ್ತರದ ನಂತರ ವಿಧಾನಸಭೆ ಈ ವಿಧೇಯಕವನ್ನು ಧ್ವನಿ ಮತದಿಂದ ಅಂಗೀಕರಿಸಿತು.

Leave a Reply