ವಿಜಯಪುರ: ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿಕೆಟ್ ಘೋಷಣೆ ವೇಳೆ ಗುಂಡು ಹಾರಿಸಿ ಸಂಭ್ರಮ ವ್ಯಕ್ತಪಡಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್ ಪುತ್ರ ಸಮರ್ಥಗೌಡ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಜಯಪುರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರು, ಮುಖಂಡ ಸಂಗಮೇಶ ಅವರು ಸಮರ್ಥಗೌಡ ಅವರು ಗುಂಡು ಹಾರಿಸಿದ ವಿಡಿಯೋವನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ.
ಬಬಲೇಶ್ವರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ವೇಳೆ ವಿಜುಗೌಡ ಮಗ ಸಮರ್ಥಗೌಡ ಕೈಯಲ್ಲಿ ಪಿಸ್ತೂಲು ಹಿಡಿದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮನೆಯ ಮುಂದೆ ಬಂದು ಪುತ್ರ ಐದಾರು ಬಾರಿ ಗುಂಡು ಹಾರಿ ಸಂಭ್ರಮಿಸಿದ್ದಾರೆ.
ಬಬಲೇಶ್ವರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ವೇಳೆ ವಿಜುಗೌಡ ಮಗ ಸಮರ್ಥಗೌಡ ಕೈಯಲ್ಲಿ ಪಿಸ್ತೂಲು ಹಿಡಿದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ವಿಡಿಯೋ ಬಿಡುಗಡೆ ಬಳಿಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರು, ಮುಖಂಡ ಸಂಗಮೇಶ ಅವರು ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಗೂಂಡಾಗಿರಿ ನಡೆಯುತ್ತಿದೆ. ಇಂತಹವರು ಅಭ್ಯರ್ಥಿ ಆಗಿದ್ದಾರೆ. ಬಿಜೆಪಿಯ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಇತರೆ ನಾಯಕರು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.



