ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನಿವೃತ್ತ ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಜೂನ್ 22 ರವರೆಗೆ ಮರು ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕಾರ್ಯ ಕಳೆದ ಮೇ 05 ರಿಂದ ಆರಂಭಗೊಂಡಿದ್ದು, ಕಾರ್ಯದರ್ಶಿಗಳು, ಏಕ ಸದಸ್ಯ ಆಯೋಗ, ಬೆಂಗಳೂರು ಅವರ ಆದೇಶದಂತೆ ಸಮೀಕ್ಷಾ ಕಾರ್ಯವನ್ನು ಜೂನ್ 22 ರವರೆಗೆ ಕೈಗೊಳ್ಳಲು ಮರು ವಿಸ್ತರಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ ಎರಡನೆ ಹಂತದಲ್ಲಿ, ನಾಗರೀಕ ಸೇವಾ ಕೇಂದ್ರಗಳಾದ “ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ, ಮನೆ-ಮನೆ ಭೇಟಿಯ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ನಮೂದಿಸುವ ಕಾರ್ಯ ಜೂನ್ 22 ರವರೆಗೆ ಜರುಗಲಿದೆ. ಮೂರನೆ ಹಂತದಲ್ಲಿ ಸ್ವಯಂ ಘೋಷಣೆ- ಆನ್‍ಲೈನ್ ಲಿಂಕ್ https://schedulecastesurvykarnataka.gov.i/selfdeclartion ಬಳಸಿ ಸಮೀಕ್ಷೆ ಕಾರ್ಯವೂ ಕೂಡ ಜೂನ್ 22 ರವರೆಗೆ ಜರುಗಲಿದೆ.
ಪರಿಷ್ಕೃತ ವೇಳಾಪಟ್ಟಿಯನ್ವಯ ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ಕುಟುಂಬದ ಸಂಪೂರ್ಣ ಮಾಹಿತಿ ನೀಡಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿಗಳು ಕೋರಿದ್ದಾರೆ.





