ಧಾರವಾಡ: ಜಕಣಾಚಾರಿ ಅವರು ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ತಮ್ಮ ವೃತ್ತಿ ಜೀವನದಲ್ಲಿ ನಾಡಿನ ಹಲವು ದೇವಾಲಯಗಳನ್ನು ನಿರ್ಮಿಸಿದ್ದಾರೆ. ಅವರ ಬದುಕು ಭವ್ಯ ಕಲಾಪರಂಪರೆಯ ಪ್ರತೀಕವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ರಾಮಪ್ಪ ಕೃಷ್ಣಪ್ಪ ಬಡಿಗೇರ ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದ್ದ, ಅಮರಶಿಲ್ಪಿ ಶ್ರೀ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಮರಶಿಲ್ಪಿ ಜಕಣಾಚಾರಿ ಅವರು ನಮ್ಮ ಸಮಾಜಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಭಾರತೀಯ ಇತಿಹಾಸದಲ್ಲಿ ಕಲೆಗೆ ತನ್ನದೇ ಆದ ಮಹತ್ವ ಇದೆ. ಆ ದಿಸೆಯಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು, ಹಳೆಬೀಡು, ಸೋಮನಾಥಪುರ ಮತ್ತಿತರ ಕಡೆಗಳಲ್ಲಿ ಕೆತ್ತಿರುವ ಕೆತ್ತನೆಗಳೆ ಅವರ ಅಮರ ಕಲೆಗೆ ಸಾಕ್ಷಿಯಾಗಿದೆ ಎಂದರು.
ಶಿಲ್ಪಕಲೆ ಎನ್ನುವುದು ಅತ್ಯಂತ ಕಷ್ಟಕರವಾದ ಕೆತ್ತನೆಯ ಕಲೆ. ಇಂತಹ ವಿಶೇಷ ಕಲೆಯ ಮೂಲಕ ಅಮರಶಿಲ್ಪಿ ಜಕಣಾಚಾರಿ ಅವರು ನಾಡಿನ ಶಿಲ್ಪಕಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ವಿದೇಶಿಗರು ನಮ್ಮ ನಾಡಿನ ಶಿಲ್ಪಕಲೆಯನ್ನು ನೋಡಿ ಬೆರಗಾಗುವಂತೆ ಮತ್ತು ನೋಡುಗರನ್ನು ಸೆಳೆಯುವಂತಹ ಶಿಲ್ಪಕಲೆಯನ್ನು ನಮ್ಮ ನಾಡಿನಲ್ಲಿ ನಿರೂಪಿಸಲಾಗಿದೆ. ಇಂತಹ ಶಿಲ್ಪಕಲೆಗಳನ್ನು ಇಂದು ನಾವುಗಳು ಸ್ಮರಿಸುವ ಮೂಲಕ ಶಿಲ್ಪಕಲೆಗಳನ್ನು ಗೌರವದಿಂದ ಪೆÇೀಷಿಸಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಮಾತನಾಡಿ, ನಮ್ಮ ನಾಡಿನಲ್ಲಿರುವ ಕಸೂತಿ, ಬಟ್ಟೆ ನೇಯುವುದು, ಕುಂಬಾರಿಕೆ, ಬುಟ್ಟಿ ನೇಯುವುದು, ಹಾಸಿಗೆ ನೇಯುವುದು ಮುಂತಾದ ಕಲೆಗಳು ನಶಿಸಿ ಹೋಗುತ್ತಿವೆ. ಇವುಗಳ ಸಂರಕ್ಷಣೆ ಮತ್ತು ಮುಂದುವರಿಕೆಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಆಸಕ್ತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಧಾರವಾಡ ಆಕಾಶವಾಣಿ ನಿವೃತ್ತ ಕಾರ್ಯಕ್ರಮ ನಿರ್ವಾಹಕ ಡಾ. ವಿರೂಪಾಕ್ಷ. ಬಿ. ಬಡಿಗೇರ ಅಮರಶಿಲ್ಪಿ ಶ್ರೀ ಜಕಣಾಚಾರಿ ಅವರ ಜೀವನ ಚರಿತ್ರೆ ಕುರಿತು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಸಾಧಕರಾದ ರವೀಂದ್ರಾಚಾರ್ಯ ಮತ್ತು ಕೃಷ್ಣಾ ಹಿತ್ತಾಳೆ ಅವರನ್ನು ಸನ್ಮಾಸಿಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಆರತಿ ದೇವಶಿಕಾಮಣಿ, ಮಹಾರುದ್ರ ಬಡಿಗೇರ, ಶ್ರೀ ಮೌನೇಶ್ವರ ಧರ್ಮನಿಧಿ ಸಂಸ್ಥೆಯ ಅಧ್ಯಕ್ಷ ಮಹಾರುದ್ರ ಬ. ಬಡಿಗೇರ, ವಿಶ್ವಕರ್ಮ ಜಿಲ್ಲಾ ಮಹಾಸಭಾ ಅಧ್ಯಕ್ಷ ಕಾಳಪ್ಪ ವಿ.ಬಡಿಗೇರ, ಜನಜಾಗೃತಿ ಸಮಿತಿ ಅಧ್ಯಕ್ಷ ವಸಂತ ಅರ್ಕಾಚಾರ, ವಿಶ್ವಕರ್ಮ ಮಹಾಒಕ್ಕೂಟ ಅಧ್ಯಕ್ಷ ನಿರಂಜನ ಎನ್. ಬಡಿಗೇರ, ವಿಶ್ವಕರ್ಮ ನೌಕರರ ಮತ್ತು ನಿವೃತ್ತ ನೌಕರರ ಸಂಘ ಅಧ್ಯಕ್ಷ ವಿಠ್ಠಲ ಜಿ. ಕಮ್ಮಾರ, ಮೌನೇಶ್ವರ ಟ್ರಸ್ಟ್ ಕಮಿಟಿ ನಿರ್ದೇಶಕ ಸಂತೋಷ ಬಡಿಗೇರ, ರಾಜ್ಯ ಮಹಿಳಾ ಅಧ್ಯಕ್ಷೆ ಲಕ್ಷ್ಮೀ ಭಾಸಕರ ಬಡಿಗೇರ ಹಾಜರಿದ್ದರು.



