ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ವತಿಯಿಂದ ಆಯೋಜಿಸಲಾದ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಭಾರೀ ಜನಸ್ತೋಮಹ ಸೇರಿದ್ದು, ನಗರದ ಅಖ್ತರ್ ರಝಾ ಸರ್ಕಲ್‌ನಿಂದ ಪ್ರಾರಂಭವಾದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾರ್ಪೊರೇಷನ್ ಕಚೇರಿಗೆ ತಲುಪಿ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸಿದ್ದರು. ಈ ವೇಳೆ “ಸ್ವಾಭಿಮಾನದ ರಾಜಕೀಯಕ್ಕಾಗಿ ಒಂದಾಗೋಣ”, ಭಯ ಮುಕ್ತ ಸಮಾಜ ನಿರ್ಮಿಸೋಣ, ಕುಟುಂಬ ರಾಜಕಾರಣಕ್ಕೆ ತಿಲಾಂಜಲಿ ಹಾಡೋಣ ಎಂಬ ಘೋಷಣೆಗಳು ಮೊಳಗಿದವು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಮೆರವಣಿಗೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ತಾಹೀರ್, ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು, ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಮತ್ತು ಅಬ್ದುಲ್ ಹನ್ನನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು, ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ಹಾಗೂ ರಾಜ್ಯ ಸಮಿತಿ ಸದಸ್ಯರಾದ ಫಯಾಜ್ ಅಹಮದ್ ಮತ್ತು ಅಬ್ರಾರ್ ಅಹಮದ್ ಉಪಸ್ಥಿತರಿದ್ದರು.




