ಬದ್ದತೆ ಮತ್ತು ಕಠಿಣ ಪರಿಶ್ರಮದ ಮೂಲಕ ಪಕ್ಷವನ್ನು ‘ಜನಾಧಿಕಾರದ ಕಡೆಗೆ’ ಮುನ್ನಡೆಸುವ ಮಹತ್ವದ ಪಾತ್ರ ನಿಭಾಯಿಸಬೇಕಿದೆ – ಅಫ್ಸರ್ ಕೊಡ್ಲಿಪೇಟೆ
ಮೈಸೂರು: ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ರವರ ಮಾರ್ಗದರ್ಶನದಲ್ಲಿ ಹಾಗೂ ರಾಜ್ಯ ERM ಉಸ್ತುವಾರಿಯಾದ ಅಬ್ರಾರ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ಮೈಸೂರಿನ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಚುನಾಯಿತ ಜನಪ್ರತಿನಿಧಿಗಳ ಮೇಲುಸ್ತುವಾರಿಗಳ (ERM) ಸಭೆ ನಡೆಯಿತು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಫ್ಸರ್ ಕೊಡ್ಲಿಪೇಟೆ “ಪಕ್ಷದ ರಾಜಕೀಯ ಶಕ್ತಿ ಬಲಪಡಿಸಲು ಮತ್ತು ಸಾರ್ವತ್ರಿಕ ಬೆಂಬಲ ಪಡೆಯಲು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪ್ರಮುಖ ಹಂತವಾಗಿವೆ. ಈ ಹಿನ್ನಲೆಯಲ್ಲಿ ಚುನಾಯಿತ ಪ್ರತಿನಿಧಿಗಳಾಗಿರುವ SDPI ಪಕ್ಷದ ಹೋರಾಟಗಾರರ ಜವಾಬ್ದಾರಿ ಬಹಳ ಹೆಚ್ಚಾಗಿರುತ್ತದೆ. ರಾಜಕೀಯ ಬದ್ಧತೆ ಮತ್ತು ಕಠಿಣ ಪರಿಶ್ರಮದ ಮೂಲಕ ಈ ರಾಜಕೀಯ ಚಳುವಳಿಯನ್ನು “ಜನಾಧಿಕಾರದ ಕಡೆಗೆ” ಮುನ್ನಡೆಸುವ ಮಹತ್ವದ ಪಾತ್ರ ಚುನಾಯಿತ ಜನಪ್ರತಿನಿಧಿಗಳು ನಿಭಾಯಿಸಬೇಕಿದೆ ಎಂದು ಹಿತವಚನ ನುಡಿದರು.
ಸಭೆಯಲ್ಲಿ ಮಾತನಾಡಿದ ಅಬ್ರಾರ್ ಅಹ್ಮದ್, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಯ್ಕೆಯಾಗಿರುವ SDPI ಪಕ್ಷದ ಪಾಲಿಕೆ ಸದಸ್ಯರ ಹಾಗೂ ಕೌನ್ಸಿಲರ್‌ಗಳ ಕಾರ್ಯಕ್ಷಮತೆ ಹೆಚ್ಚಿಸುವ ಮತ್ತು ಅವಲೋಕನ ನಡೆಸುವ ನಿಟ್ಟಿನಲ್ಲಿ ಜುಲೈ 24 ರಂದು ಮೈಸೂರಿನಲ್ಲಿ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿರುವ ಕುರಿತು ಸಭೆಗೆ ಮಾಹಿತಿ ನೀಡಿದರು.
ಈಗಾಗಲೇ ಪ್ರತಿನಿಧಿಸುತ್ತಿರುವ ವಾರ್ಡುಗಳಲ್ಲಿ ಆಗಿರುವ ಅಭಿವೃದ್ಧಿ ಕೆಲಸ ಕಾರ್ಯಗಳು, ಸರಕಾರದ ಯೋಜನೆಗಳ ಅನುಷ್ಠಾನ ಮತ್ತು ಜನರಲ್ಲಿ ಪಕ್ಷದ ತತ್ವ ಸಿದ್ದಾಂತದ ಕುರಿತು ವ್ಯಾಪಕ ಪ್ರಚಾರಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ವಿವಿಧ ಜಿಲ್ಲೆಗಳ ಚುನಾಯಿತ ಜನಪ್ರತಿನಿದಿಗಳ ವ್ಯವಸ್ಥಾಪನ ಸಮಿತಿಯ ಉಸ್ತುವಾರಿಗಳು ಉಪಸ್ಥಿತರಿದ್ದರು.




