SDPI ರಾಯಚೂರು ನಗರ ಜಿಲ್ಲೆ ಜಿಲ್ಲಾಧ್ಯಕ್ಷರಾಗಿದ್ದ ಜೀಲಾನಿ ಪಾಷ ಪಕ್ಷದಿಂದ ಉಚ್ಚಾಟನೆ

2 years ago

ನೂತನ ಅಧ್ಯಕ್ಷರಾಗಿ ಸೈಯದ್ ಇರ್ಫಾನ್ ಆಯ್ಕೆ

ರಾಯಚೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಯಚೂರು ನಗರ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮತೀನ್ ಅನ್ಸಾರಿ ಅವರ ಅಧ್ಯಕ್ಷತೆಯಲ್ಲಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಸಮಿತಿ ಸದಸ್ಯ ಅಪ್ಸರ್ ಕೆ. ಆರ್ ನಗರ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಕಚೇರಿಯಲ್ಲಿ ಜರುಗಿತು.

ಸಭೆಯಲ್ಲಿ ಮುಂಬರಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚಿಸಲಾಯಿತು. ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಕಾರಣ ಜಿಲ್ಲಾಧ್ಯಕ್ಷರಾಗಿದ್ದ ಜೀಲಾನಿ ಪಾಷ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನದಿಂದ ಮತ್ತು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಸಿದ ಆಂತರಿಕ ಚುನಾವಣೆಯಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ಸೈಯದ್ ಇರ್ಫಾನ್ ರವರನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾ ಖಜಾಂಚಿ ಆಗಿದ್ದ ಬಷೀರ್ ಅಹ್ಮದ್ ಅವರು ವೈಯಕ್ತಿಕ ಕಾರಣಗಳಿಂದ ತಮ್ಮ ಸ್ಥಾನಕ್ಕೆ ನೀಡಿದ ರಾಜೀನಾಮೆ ಅಂಗೀಕರಿಸಿ, ಆ ಸ್ಥಾನಕ್ಕೆ ನಡೆದ ಆಂತರಿಕ ಚುನಾವಣೆಯಲ್ಲಿ ಸಯ್ಯದ್ ಅಬ್ದುಲ್ ಅಝೀಝ್ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುಹಮ್ಮದ್ ಗೌಸ್ , ಜಂಶೀರ್ ಅಲಿ ಜಿಲ್ಲಾ, ಕಾರ್ಯದರ್ಶಿ ಶಫಿ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a Reply