ವಿದ್ಯುತ್ ದರ ಏರಿಕೆ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ: ಎಸ್.ಡಿ.ಪಿ.ಐ ಎಚ್ಚರಿಕೆ

5 years ago

ಬೆಂಗಳೂರು: ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಮಂಡಳಿ ಹೊರಡಿಸಿದ ಆದೇಶದಂತೆ ಸರಾಸರಿ 3.84 ಶೇಕಡ ವಿದ್ಯುತ್ ಏರಿಕೆ ಮಾಡಿದೆ. ರಾಜ್ಯ ಸರಕಾರ ಕೂಡಲೇ ಈ ಆದೇಶವನ್ನು ರದ್ದುಗೊಳಿಸಬೇಕು ಮತ್ತು ತಿಂಗಳಿಗೆ 1000 ರೂಪಾಯಿಗಿಂತ ಕಡಿಮೆ ವಿದ್ಯುತ್ ಬಳಕೆಮಾಡುವ ಮಧ್ಯಮ ವರ್ಗಗಳ ಗೃಹ ಬಳಕೆ ವಿದ್ಯುತ್ ಗೆ ವಿಶೇಷ ಸಬ್ಸಿಡಿ ನೀಡಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ ಪಕ್ಷದ ರಾಜ್ಯಾಧ್ಯಕ್ಷ   ಅಬ್ದುಲ್ ಹನ್ನಾನ್ ಆಗ್ರಹಿಸಿದ್ದಾರೆ.

ಜನ ಕೊರೋನ ಸಾಂಕ್ರಾಮಿಕ ಲಾಕ್ ಡೌನ್ ನಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಈ ಸಮಯದಲ್ಲಿ ಬೆಲೆ ಏರಿಕೆ ಜನ ವಿರೋಧಿ ನೀತಿಯಾಗಿದೆ. ಕಳೆದ 18 ವರ್ಷಗಳಿಂದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸರಕಾರಗಳ ಇಂಧನ ಸಚಿವರು ಖಾಸಗಿ ಕಂಪನಿಗಳಿಂದ ಖರೀದಿಸಿದ ವಿದ್ಯುತ್, ಕಲ್ಲಿದ್ದಲು ಮತ್ತು ವಿದ್ಯುತ್ ಕಂಪನಿಗಳ ಆದಾಯ ಸೋರಿಕೆಯ ಬಗ್ಗೆ ರಾಜ್ಯ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ವಿದ್ಯುತ್ ಕಂಪನಿಗಳಲ್ಲಿ ನಡೆಯುವ ಎಲ್ಲಾ ರೀತಿಯ ಭ್ರಷ್ಟಾಚಾರಗಳ ತನಿಖೆ ಮಾಡಬೇಕು ಎಂದಿದ್ದಾರೆ.

ಮೂರು ಪಕ್ಷಗಳು ಅಧಿಕಾರಕ್ಕೆ ಬಂದಾಗ ಇಂಧನ ಸಚಿವರಾಗಲು ಯಾಕೆ ದೊಡ್ಡ ಪ್ರಮಾಣದಲ್ಲಿ ಲಾಬಿ ನಡೆಸಲಾಗುತ್ತದೆ? ಎಂಬುದು ಯಕ್ಷ ಪ್ರಶ್ನೆಯಾಗಿದೆ. ಎಸ್.ಡಿ.ಪಿ.ಐ ಪಕ್ಷದ ಈ ಬೇಡಿಕೆಗಳಿಗೆ ಸರಕಾರ ಕೂಡಲೇ ಸ್ಪಂದಿಸದಿದ್ದರೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು  ಎಸ್ಡಿಪಿಐ ಎಚ್ಚರಿಸಿದೆ.

Leave a Reply