ಹಣ ಕಿತ್ತುಕೊಂಡು ಪರಾರಿಯಾದವರಿಗೆ ಶೋಧ

3 years ago

#Search #took #money #ran #away

ಬೆಂಗಳೂರು: ಅನ್ಯ ಕಾರ್ಯ ನಿಮಿತ್ತ ಬೆಳಗಾವಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನು ಮೆಜೆಸ್ಟಿಕ್ ಬಸ್ ನಿಲ್ದಾಣದ ಸಮೀಪ ಅಡ್ಡಗಟ್ಟಿದ ದುಷ್ಕರ್ಮಿಗಳು ಬ್ಲೇಡ್‍ನಿಂದ ಕೊಯ್ದು 80 ಸಾವಿರ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಬೆಳಗಾವಿಯಲ್ಲಿ ನ್ಯಾಯಬೆಲೆ ಅಂಗಡಿ ಹೊಂದಿರುವ ಸುರೇಶ್ ಎಂಬುವರು ನಿನ್ನೆ ಬಸ್‍ನಲ್ಲಿ ನಗರಕ್ಕೆ ಬಂದು ಸಂಜೆ 5 ಗಂಟೆ ಸುಮಾರಿನಲ್ಲಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಇಳಿದು ಬಿಎಂಟಿಸಿ ಡಿಪೋ 7ರ ಬಳಿ ಹೋಗುತ್ತಿದ್ದರು. ಆ ಸಂದರ್ಭದಲ್ಲಿ ಇಬ್ಬರು ದರೋಡೆಕೋರರು ಇವರನ್ನು ಹಿಂಬಾಲಿಸಿಕೊಂಡು ಹೋಗಿ ಅಡ್ಡ ಹಾಕಿ ಬ್ಲೇಡ್‍ನಿಂದ ಕೊಯ್ದು ಅವರ ಬಳಿಯಿದ್ದ 80 ಸಾವಿರ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಸುರೇಶ್ ಅವರು ಉಪ್ಪಾರಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

Leave a Reply