ಕರ್ನಾಟಕದಲ್ಲಿ ಎರಡನೆಯ ಹಾಗೂ ಕೊನೆಯ ಹಂತದ ಚುನಾವಣೆ

2 years ago

ಬೆಂಗಳೂರು: ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೆಯ ಹಾಗೂ ಕೊನೆಯ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಮುಂಜಾನೆ 7ರಿಂದ  ಮತದಾನ ಆರಂಭವಾಗಿದೆ. ಮುಕ್ತ ಹಾಗೂ ಶಾಂತಿಯುತ ಮತದಾನಕ್ಕಾಗಿ ಆಯೋಗ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್‌ ಶೆಟ್ಟರ್‌, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭಗವಂತ್ ಖೂಬಾ ಸೇರಿದಂತೆ 227 ಅಭ್ಯರ್ಥಿಗಳ ಭವಿಷ್ಯವನ್ನು 2,59,52,958 ಮತದಾರರು ನಿರ್ಧರಿಸಲಿದ್ದಾರೆ.

14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 28,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸೂಕ್ಷ್ಮ ಮತಗಟ್ಟೆಗಳಿಗೆ ಒಬ್ಬರು ಹೆಡ್‌ಕಾನ್ಸ್ ಟೇಬಲ್‌ ಹಾಗೂ ಒಬ್ಬ ಪೇದೆಯನ್ನ ಭದ್ರತೆಗಾಗಿ ನಿಯೋಜಿಸಲಾಗಿದೆ. ಸಾಮಾನ್ಯ ಮತಗಟ್ಟೆಗೆ ಒಬ್ಬರು ಕಾನ್ಸ್ ಟೇಬಲ್‌ ಅನ್ನು ನಿಯೋಜಿಸಲಾಗಿದ್ದು, ಮತಗಟ್ಟೆಗಳ ಸಮೂಹ ಇರುವ ಕಡೆ ಕೇಂದ್ರೀಯ ಪಡೆಯನ್ನು ನಿಯೋಜಿಸಲಾಗಿದೆ.

ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಚುನಾವಣಾ ಹಾಗೂ ಭದ್ರತಾ ಸಿಬ್ಬಂದಿ ಆಯಾ ಕ್ಷೇತ್ರದ ಮಸ್ಟರಿಂಗ್‌ ಕೇಂದ್ರಗಳಲ್ಲಿ ಸಮಾವೇಶಗೊಂಡು ನಿಗದಿಪಡಿಸಿದ ಮತಗಟ್ಟೆಗಳಿಗೆ ಮತಯಂತ್ರ, ಚುನಾವಣಾ ಸಾಮಗ್ರಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮತದಾರರು ತಮಗೆ ನಿಗದಿ ಪಡಿಸಿರುವ ಮತಗಟ್ಟೆಗಳಲ್ಲಿ, ಚುನಾವಣಾ ಆಯೋಗದಿಂದ ಈಗಾಗಲೇ ನೀಡಲಾಗಿರುವ ವೋಟರ್‌ ಸ್ಲಿಪ್‌ನ ಜೊತೆಗೆ ಮತದಾರರ ಗುರುತಿನ ಚೀಟಿ, ಆಧಾರ್‌ಕಾರ್ಡ್‌, ನರೇಗ ಜಾಬ್‌ಕಾರ್ಡ್‌, ಬ್ಯಾಂಕ್‌, ಪೋಸ್‌್ಟ ಆಫೀಸ್‌ ಪಾಸ್‌ಬುಕ್‌, ಕಾರ್ಮಿಕ ಸಚಿವರು ನೀಡುವ ಆರೋಗ್ಯ ವಿಮಾ ಸ್ಮಾರ್ಟ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್‌್ಸ, ಪ್ಯಾನ್‌ ಕಾರ್ಡ್‌, ಪಾಸ್‌ಪೋರ್ಟ್‌, ಪಿಂಚಣಿಯ ದಾಖಲೆ, ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್‌ ಲಿಮಿಟೆಡ್‌ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್‌ಎ, ಎಂಎಲ್‌ಸಿಗಳಿಗೆ ನೀಡಿರುವ ಅಧಿ ಕೃತ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಸಬಲೀಕರಣ ನೀಡಿರುವ ವಿಶಿಷ್ಟ ಅಂಗವಿಕಲ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದಾಗಿದೆ.

560 ಮತಗಟ್ಟೆಗಳನ್ನು ಮಹಿಳೆಯರೇ ನಿರ್ವಹಿಸಲಿದ್ದು, 112 ಮತಗಟ್ಟೆಗಳನ್ನು ದಿವ್ಯಾಂಗರು ನಿರ್ವಹಿಸುತ್ತಾರೆ. ಇತರೆ ವಿವಿಧ ವಿಷಯಗಳ 224 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಸ್ಥಳೀಯ ಸಂಸ್ಕೃತಿ ಸಂಪ್ರದಾಯವನ್ನು ಬಿಂಬಿಸುವಂತೆ ಅಲಂಕರಿಸಲಾಗಿದೆ.

Leave a Reply