ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಘೋಷಣೆ

2 years ago

ಬೆಂಗಳೂರು: ಬದಲಾದ ನಿಯಮಾವಳಿಗಳಂತೆ ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29ರಿಂದ ಮೇ 16 ರವರೆಗೆ ನಡೆಯಲಿದ್ದು, ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್ಸೈಟ್ https://kseab.karnatala.gov.in ನಲ್ಲಿ ಪಡೆಯಬಹುದು.

ಹನ್ನೊಂದು ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್ಲೈನ್ನಲ್ಲಿ ಪಡೆಯಬಹುದು. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 32,848 ವಿದ್ಯಾರ್ಥಿಗಳು ಫಲಿತಾಂಶವನ್ನು ಉನ್ನತೀಕರಿಸಿಕೊಳ್ಳಲು ಪರೀಕ್ಷೆ ತೆಗೆದುಕೊಂಡಿದ್ದು, 27,092 ವಿದ್ಯಾರ್ಥಿಗಳು ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ನಾಟ್ ಕ್ಲಿಯರ್ಡ್ ವಿದ್ಯಾರ್ಥಿಗಳ ಸಂಖ್ಯೆ 89,221 ಆಗಿದ್ದು, 139 ವಿದ್ಯಾರ್ಥಿಗಳು ಶೇ.75ರಷ್ಟು ಹಾಜರಾತಿ ಇಲ್ಲದೇ 17 ವರ್ಷ ತುಂಬಿದ ಖಾಸಗಿಯಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಮಂಡಳಿ ಮಾಹಿತಿ ನೀಡಿದೆ.

ದ್ವಿತೀಯ ಪರೀಕ್ಷೆ 2ಕ್ಕೆ ಹಾಜರಾಗುತ್ತಿರುವ ಅಭ್ಯರ್ಥಿಗಳು

ವಿದ್ಯಾರ್ಥಿಗಳು – 84,933
ವಿದ್ಯಾರ್ಥಿನಿಯರು – 64,367
ಒಟ್ಟು – 1,49,300
ಕಲಾ ವಿಭಾಗ – 52,492
ವಾಣಿಜ್ಯ ವಿಭಾಗ – 39,427
ವಿಜ್ಞಾನ ವಿಭಾಗ – 57,381
ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳು

Leave a Reply