ಬೆಂಗಳೂರು: ದ್ವಿತೀಯ ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಲಿದ್ದು, ರಾಜ್ಯದಲ್ಲಿ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಸೇರಿದ್ದಾರೆ. 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 16 ರವರೆಗೂ ಈ ಪರೀಕ್ಷೆ ನಡೆಸಲಿದೆ. ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಎರಡನೇ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ ಕೆಲ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ.
ಪರೀಕ್ಷಾ ದಿನಾಂಕಗಳು
ಕನ್ನಡ, ಅರೇಬಿಕ್ – ಏಪ್ರಿಲ್ 29
ಇತಿಹಾಸ, ಭೌತಶಾಸ್ತ್ರ – ಏಪ್ರಿಲ್ 30
ಇಂಗ್ಲಿಷ್ – ಮೇ 2
ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ –ಮೇ 3
ಭೌಗೋಳ ಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಗೃಹವಿಜ್ಞಾನ, ಮೂಲ ಗಣಿತ – ಮೇ 4
ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ – ಮೇ 9
ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ – ಮೇ 11
ಅರ್ಥಶಾಸ್ತ್ರ – ಮೇ 13
ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ – ಮೇ 14
ಹಿಂದಿ – ಮೇ 15
ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ – ಮೇ 16
ಭಾಷಾ ವಿಷಯದ ಪರೀಕ್ಷೆಗಳು ಬೆಳಗಿನ ಅವಧಿಯಲ್ಲಿ ನಡೆದರೆ, ಇತರೆ ಕಲಾ ಮತ್ತು ಕೌಶಲ್ಯ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳಾದ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಬ್ಯೂಟಿ ಅಂಡ್ ವೆಲ್ನೆಸ್ ಪರೀಕ್ಷೆಗಳು ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ ನಡೆಯಲಿವೆ.
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದಿದ್ದ ಸಿಇಟಿಯಲ್ಲಿ ಪಠ್ಯಕ್ಕೆ ಹೊರತಾದ ಪ್ರಶ್ನೆಗಳು ಸೇರಿದ್ದರಿಂದ ಉಂಟಾಗಿರುವ ಬಿಕ್ಕಟ್ಟಿಗೆ ಉನ್ನತ ಶಿಕ್ಷಣ ಇಲಾಖೆ ಇಂದು ತಮ್ಮ ನಿರ್ಧಾರ ಪ್ರಕಟಿಸಲಿದೆ.
ಪಠ್ಯಕ್ಕೆ ಹೊರತಾದ ಪ್ರಶ್ನೆಗಳು ಎಷ್ಟು ಸೇರಿವೆ ಎನ್ನುವ ಮಾಹಿತಿ ನೀಡಲು ಆಯಾ ವಿಷಯವಾರು ತಲಾ ಮೂವರು ತಜ್ಞರನ್ನು ಒಳಗೊಂಡ ನಾಲ್ಕು ಸಮಿತಿಗಳನ್ನು ರಚಿಸಿ ಇದೇ ಏ. 22ರಂದು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಅತ್ತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೂ ಆಕ್ಷೇಪಣೆಗಳನ್ನು ಸಲ್ಲಿಸಲು ಏ. 27ರವರೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿತ್ತು. ಸಮಿತಿ ವರದಿ ಹಾಗೂ ವಿದ್ಯಾರ್ಥಿಗಳ ಆಕ್ಷೇಪಣೆಗಳನ್ನು ಪರಿಗಣಿಸಿ ನಿರ್ಧಾರ ಪ್ರಕಟಿಸಲಾಗುತ್ತಿದೆ.




