ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ 2 ಬರೆಯಲು ಇಚ್ಛಿಸುವವರು ಏಪ್ರಿಲ್ 10 ರಿಂದ 16 ರವರೆಗೆ ಅರ್ಜಿ ಸಲ್ಲಿಸಬಹುದು. ಕಾಲೇಜಿನಲ್ಲಿ ಪ್ರಾಂಶುಪಾಲರ ಸಹಾಯದೊಂದಿಗೆ ಅಥವಾ ವೆಬ್ಸೈಟ್ನಲ್ಲಿ ನೇರವಾಗಿ ಪರೀಕ್ಷೆ 2ಕ್ಕೆ ನೋಂದಣಿ ಮಾಡಿಕೊಳ್ಳಬಹುದು. ಇದು ದಂಡ ರಹಿತ ಅವಕಾಶವಾಗಿದೆ. ಇನ್ನು ಇದರ ನಂತರ ದಂಡ ಸಹಿತವಾಗಿ ಏಪ್ರಿಲ್ 17 ಮತ್ತು 18ಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಪರೀಕ್ಷೆ 2 ಅನ್ನು ಬರೆಯುವವರಿಗೆ ಒಂದು ವಿಷಯಕ್ಕೆ 140 ರೂಪಾಯಿ ಶುಲ್ಕವನ್ನು ನಿಗದಿ ಮಾಡಿದ್ದರೆ, ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಕ್ಕೆ 400 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ.
2023ರ ನಂತರ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು 2024ರ ದ್ವಿತೀಯ ಪಿಯುಸಿ ಪರೀಕ್ಷೆ- 2ರ ಪರೀಕ್ಷೆಯನ್ನು ತೆಗೆದುಕೊಳ್ಳಲು, ಮಂಡಳಿಯು ಒದಗಿಸಿದ ಫಲಿತಾಂಶದ ಪಟ್ಟಿಯ ಆಧಾರದ ಮೇಲೆ ಶುಲ್ಕವನ್ನು ಭರಿಸಿಕೊಳ್ಳಬಹುದು.
ಪ್ರಾಂಶುಪಾಲರು 2022ನೇ ಸಾಲಿನ ಅಥವಾ ಹಿಂದಿನ ವರ್ಷದ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿಯನ್ನು ‘MCA’ ಆಧಾರದ ಮೇಲೆ ಮಾತ್ರ ಸ್ವೀಕರಿಸಬೇಕು.
ದ್ವಿತೀಯ ಪಿಯು ಪರೀಕ್ಷೆ 2 ಬರೆಯಲು ಇಚ್ಛಿಸುವವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರೆ ಅದರ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಕೂಡಲೇ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆದರೆ, ಯಾವುದೇ ಸಂದರ್ಭದಲ್ಲಿ “ಕರ್ನಾಟಕ ಪ್ರಿ-ಯೂನಿವರ್ಸಿಟಿ ಕೋರ್ಸ್ ಎಸ್ಎಲ್ಪಿಇ 1997, 29 (ಎ)” ಪ್ರಕಾರ ಈ ಹಿಂದೆ ಗಳಿಸಿದ ಅಂಕಗಳನ್ನು ಮರುಮೌಲ್ಯಮಾಪನದ ನಂತರ ಮರುಸ್ಥಾಪಿಸಲು ಸಾಧ್ಯವಿಲ್ಲ. ಮರು ಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ-1ರ ಅಂಕಗಳೆಂದು ಪರಿಗಣಿಸಲಾಗುವುದು. ಇನ್ನು ಮರು ಮೌಲ್ಯಮಾಪಕರ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಬಗ್ಗೆ ಯಾವುದೇ ಮೇಲ್ಮನವಿಗಳಿಗೆ ಅವಕಾಶವಿಲ್ಲ.
ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ ಮೂಲಕ ನೋಡಿಕೊಳ್ಳಬಹುದು. ಇನ್ನು ಅಂಕಗಳ ಮರು ಎಣಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿದೆ.




