ಮೇ 26 ರಂದು ಜೆಇಇ ಪರೀಕ್ಷೆ
ಬಳ್ಳಾರಿ: ಜಿಲ್ಲೆಯಲ್ಲಿ ಮೇ 26 ರಂದು ನಗರದ 02 ಕೇಂದ್ರಗಳಲ್ಲಿ ಜೆಇಇ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ಒಳಗಿನ ಆವರಣವನ್ನು ಸಿಆರ್‍ಪಿಸಿ ಕಲಂ 144ರ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನಗರದ ಬಿಐಟಿಎಂ ಕಾಲೇಜು ಮತ್ತು ಕಿಷ್ಕಿಂದ ವಿಶ್ವವಿದ್ಯಾಲಯ ಕೇಂದ್ರಗಳಲ್ಲಿ ಜೆಇಇ ಪರೀಕ್ಷೆಗಳು ಬೆಳಿಗ್ಗೆ 09 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02.30 ರಿಂದ ಸಂಜೆ 05.30 ರವರೆಗೆ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಒಳಗಿನ ಆವರಣವನ್ನು ನಿಬರ್ಂಧಿತ ಪ್ರದೇಶವೆಂದು ಘೋಷಿಸಿದ್ದಾರೆ.
ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಹಾಗೂ ಬೆಳಿಗ್ಗೆ 08 ರಿಂದ ಸಂಜೆ 06 ರ ವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶದಲ್ಲಿ ತಿಳಿಸಿದ್ದಾರೆ.




