ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ನಿಗಮದಿಂದ ಇತರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಇಡಿ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ತಿಳಿಸಿದೆ.
ಈ ಕುರಿತು ಇಡಿ ಅಧಿಕಾರಿಗಳು ಹೊರಡಿಸಿರುವ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಚುನಾವಣಾ ವೆಚ್ಚದ ಖರ್ಚು ಸೇರಿ ಅನೇಕ ವಿಚಾರಗಳನ್ನು ಬಹಿರಂಗ ಪಡಿಸಲಾಗಿದೆ. ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಪತ್ರಿಕಾ ಪ್ರಕಟಣೆಯಲ್ಲಿ 24 ಮಂದಿ ಆರೋಪಿಗಳ ಹೆಸರು ಉಲ್ಲೇಖಿಸಿದೆ.
ಪ್ರಕರಣದಲ್ಲಿ ಬಿ.ನಾಗೇಂದ್ರ ಪ್ರಮುಖ ರೂವಾರಿ ಎಂದು ಉಲ್ಲೇಖಿಸಿದೆ. ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕನ ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ್, ಬ್ಯಾಂಕ್ ಅಧ್ಯಕ್ಷ ಇಟಕಾರಿ ಸತ್ಯನಾರಾಯಣ, ವಾಲ್ಮೀಕಿ ನಿಗಮದ ಎಂಡಿ ಜೆ.ಜಿ.ಪದ್ಮನಾಭ, ಸಹಚರರಾದ ನಾಗೇಶ್ವರ ರಾವ್, ನೆಕ್ಕುಂಟಿ ನಾಗರಾಜ್ ಹಾಗೂ ವಿಜಯ್ ಕುಮಾರ್ ಗೌಡ ಸೇರಿದಂತೆ 24 ಮಂದಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಅವ್ಯವಹಾರ ಸಂಬಂಧ ಎಸ್ಐಟಿ ಹಾಗೂ ಸಿಬಿಐ ಪರ್ಯಾಯವಾಗಿ ತನಿಖೆ ನಡೆಸಿದ್ದು, ಪತ್ತೆ ಹಚ್ಚಲಾದ 89.62 ಕೋಟಿ ಹಣವನ್ನ ಆಂಧ್ರ ಹಾಗೂ ತೆಲಂಗಾಣದ ವಿವಿಧ ಬ್ಯಾಂಕ್ ಗಳಲ್ಲಿ ನಕಲಿ ಖಾತೆಗಳಿಗೆ ವರ್ಗವಣೆ ಮಾಡಲಾಗಿದೆ.
ಬೆಂಗಳೂರು ನಗರದ ಎಂ.ಜಿ.ರೋಡ್ ನಲ್ಲಿರುವ ಯೂನಿಯನ್ ಬ್ಯಾಂಕ್ ನ ನಿಗಮದ ಖಾತೆಯಿಂದ 187 ಕೋಟಿ ರೂ.ಹಣ ವರ್ಗಾವಣೆಯಾಗಿತ್ತು. ಇದರಲ್ಲಿ 43.33 ಕೋಟಿ ಹಣವನ್ನ ರಾಜ್ಯದ ಗಂಗಾ ಕಲ್ಯಾಣ ಯೋಜನೆಗೆ ಮೀಸಲಿಡಲಾಗಿತ್ತು. ಸರ್ಕಾರದ ನಿರ್ದೇಶನವನ್ನ ಗಾಳಿಗೆ ತೂರಿ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ನಗದಾಗಿ ಪರಿವರ್ತನೆ ಮಾಡಲಾಗಿತ್ತು.
ಬಳ್ಳಾರಿ ಲೋಕಸಭಾ ಚುನಾವಣೆ ವೆಚ್ಚಕ್ಕಾಗಿ ನಿಗಮದ 20.19 ಕೋಟಿ ರೂಪಾಯಿ ನಾಗೇಂದ್ರ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಜೊತೆಗೆ ವೈಯಕ್ತಿಕ ಬಳಕೆಗೆ ವಿನಿಯೋಗ ಮಾಡಿಕೊಂಡಿದ್ದಾರೆ. ಮಾಜಿ ಸಚಿವರ ಮನೆ ಮೇಲೆ ನಡೆಸಿದ ದಾಳಿ ವೇಳೆಗೆ ಕೆಲ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. ನಾಗೇಂದ್ರ ಆಪ್ತ ವಿಜಯ್ ಕುಮಾರ್ ಮೊಬೈಲ್ ಫೋನ್ ವಶಕ್ಕೆ ಪಡೆದು ರಿಟ್ರೀವ್ ಮಾಡಲಾಗಿದ್ದು ಅದರಲ್ಲಿ ಹಣ ಹಂಚಿಕೆ ಅವ್ಯವಹಾರ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




