ಬೆಂಗಳೂರು: ನಿಗದಿತ ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹೊಂದಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಏಳು ಸರ್ಕಾರಿ ಅಧಿಕಾರಿಗಳ ಕಚೇರಿ ಮತ್ತು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ನೋಟು ಎಣಿಸುವ ಯಂತ್ರ ಸೇರಿದಂತೆ ಅಪಾರ ಪ್ರಮಾಣದ ನಗದು ಮತ್ತು ಆಸ್ತಿ-ಪಾಸ್ತಿ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬೆಂಗಳೂರು, ಬೆಳಗಾವಿ ಚಿತ್ರದುರ್ಗ ರಾಯಚೂರು ಸೇರಿದಂತೆ 10 ಜಿಲ್ಲೆಗಳ 25 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು.
ಬೆಳಗಾವಿ ದಕ್ಷಿಣ ಉಪನೋಂದಣಾಧಿಕಾರಿ ಕಚೇರಿಯ ಪ್ರಥಮ ವಿಭಾಗದ ಸಹಾಯಕ ಸಂಜಯ್ ಮಾಂಡೆಡ್, ಚಿತ್ರದುರ್ಗ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ವ್ಯವಸ್ಥಾಪಕ ಶಶಿಧರ್, ಬಾಗಲಕೋಟೆಯ ಹೊಲಗೇರಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಹಿರೇಮಠ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಬ್ಬಾಳ ವಿಭಾಗದ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಾಧವರಾವ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ರಾಯಚೂರು ಜಿಲ್ಲಾ ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ನರಸಿಂಗರಾವ್ ಗುಜ್ಜರ್, ಪಶುಸಂಗೋಪನಾ ಇಲಾಖೆಯ ಸಂಜಯ್ ಅಣ್ಣಪ್ಪ ದುರ್ಗಣ್ಣನವರ್ ಅವರ ಕಚೇರಿ ಮತ್ತು ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.




